ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ ಸೇವಾಲಾಲ್ ಜಯಂತಿ ಫೆ. 15ಕ್ಕೆ

Published 27 ಡಿಸೆಂಬರ್ 2023, 14:15 IST
Last Updated 27 ಡಿಸೆಂಬರ್ 2023, 14:15 IST
ಅಕ್ಷರ ಗಾತ್ರ

ಬೆಂಗಳೂರು: ಬಂಜಾರ (ಲಂಬಾಣಿ) ಜನ ಸೇವಾ ಸಂಘದ ವತಿಯಿಂದ 2024ರ ಫೆ. 15ರಂದು ಸಂತ ಸೇವಾಲಾಲ್‌ ಜಯಂತಿಯನ್ನು ಜೆ.ಸಿ.ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎ.ಆರ್. ಹನುಮಂತ ನಾಯ್ಕ, ‘ಲಂಬಾಣಿ ಸಂಸ್ಕೃತಿಯ ಬಗ್ಗೆ ಅರಿವಿಲ್ಲದೇ ಬಹಳಷ್ಟು ಜನ ಬೇರೆ ಬೇರೆ ಧರ್ಮಗಳಿಗೆ ಮತಾಂತರ ಆಗುತ್ತಿದ್ದಾರೆ. ಇದನ್ನು ನಿಯಂತ್ರಿಸುವ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಲಾಗುವುದು. ಇದೇ ಸಂದರ್ಭದಲ್ಲಿ ರಾಷ್ಟ್ರ‌ಮಟ್ಟದಲ್ಲಿ ವಧುವರಾನ್ವೇಷಣೆ ಸಮಾವೇಶ ನಡೆಯಲಿದೆ’ ಎಂದರು.

‘ನಗರ ಪ್ರದೇಶಗಳಲ್ಲಿರುವ ಲಂಬಾಣಿ ಸಮುದಾಯದವರು ನಮ್ಮ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮೂಲಕ ನಮ್ಮ ಸಂಸ್ಕೃತಿಯ ಪರಿಚಯ ಮಾಡಿಕೊಡಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT