ಭಾನುವಾರ, ಏಪ್ರಿಲ್ 2, 2023
33 °C

ಸ್ಯಾಂಟ್ರೊ ರವಿ ಆರೋಗ್ಯದಲ್ಲಿ ಏರುಪೇರು: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅತ್ಯಾಚಾರ, ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆಕಾಯ್ದೆ ಅಡಿ ಬಂಧನಕ್ಕೆ ಒಳಗಾಗಿ ಸಿಐಡಿ ವಶದಲ್ಲಿರುವ ಕೆ.ಎಸ್‌.ಮಂಜುನಾಥ ಅಲಿ ಯಾಸ್‌ ಸ್ಯಾಂಟ್ರೊ ರವಿ ಆರೋಗ್ಯ ದಲ್ಲಿ ಏರುಪೇರು ಉಂಟಾಗಿದೆ. ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರಿನ 6ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ಜ. 30ರ ವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿತ್ತು. ಅದರಂತೆ ಆತನನ್ನು ಬೆಂಗಳೂರಿಗೆ ಕರೆ ತಂದು ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿತ್ತು.

‘ಗುರುವಾರ ರಾತ್ರಿ ಊಟ ಸೇವಿಸದೆ ಮಾತ್ರೆ ತೆಗೆದುಕೊಂಡಿದ್ದ ರವಿ ಶುಕ್ರವಾರ ಬೆಳಿಗ್ಗೆ ಅಸ್ವಸ್ಥ ಗೊಂಡು ಕುಸಿದು ಬಿದ್ದಿದ್ದ. ಸಿಬ್ಬಂದಿ ಗಮನಿಸಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಮೂಲಗಳು ಹೇಳಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು