ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾ.ರಾ. ಗೋವಿಂದು, ಪ್ರವೀಣ್‌ ಕುಮಾರ್ ಶೆಟ್ಟಿಗೆ ‘ಕುವೆಂಪು ಸಿರಿಗನ್ನಡ’ ಪ್ರಶಸ್ತಿ

Published 5 ಏಪ್ರಿಲ್ 2024, 19:49 IST
Last Updated 5 ಏಪ್ರಿಲ್ 2024, 19:49 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2024ರ ‘ಕುವೆಂಪು ಸಿರಿಗನ್ನಡ ದತ್ತಿ’ ಪ್ರಶಸ್ತಿಗೆ ಕನ್ನಡ ಹೋರಾಟಗಾರರಾದ ಸಾ.ರಾ.ಗೋವಿಂದು ಮತ್ತು ಪ್ರವೀಣ್ ಕುಮಾರ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ.

ಸಾ.ರಾ. ಗೋವಿಂದು ಚಿತ್ರರಂಗದಲ್ಲಿಯೂ ಸಕ್ರಿಯವಾಗಿದ್ದವರು. 18ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ, ರಾಜ್‌ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು. ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು. ಪ್ರವೀಣ್ ಕುಮಾರ್ ಶೆಟ್ಟಿ ಕನ್ನಡ ಪರ ಹೋರಾಟಗಳಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ಪ್ರವೀಣ್ ಕುಮಾರ್ ಶೆಟ್ಟಿ
ಪ್ರವೀಣ್ ಕುಮಾರ್ ಶೆಟ್ಟಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT