ಮಂಗಳವಾರ, ಅಕ್ಟೋಬರ್ 20, 2020
21 °C

‘ವಿದ್ಯಾಗಮ: ಮೃತಪಟ್ಟ ಶಿಕ್ಷಕರಿಗೆ ಪರಿಹಾರ ನೀಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿದ್ಯಾಗಮ ಕಾರ್ಯಕ್ರಮದಡಿ ಕೆಲಸ ಮಾಡುತ್ತಿದ್ದ ವೇಳೆ ಸೋಂಕಿತರಾಗಿ ಸಾವಿಗೀಡಾದ ಶಿಕ್ಷಕರಿಗೆ ಸರ್ಕಾರ ಪರಿಹಾರ ಘೋಷಿಸಬೇಕು. ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿರುವವರ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಒತ್ತಾಯಿಸಿದೆ. 

ಸೋಂಕಿತ ಶಿಕ್ಷಕರು ಸಂಪೂರ್ಣ ಗುಣಮುಖವಾಗುವವರೆಗೂ ಸಂಬಳ ಸಹಿತ ರಜೆ ನೀಡಬೇಕು ಎಂದು ಸಮಿತಿ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಆಗ್ರಹಿಸಿದ್ದಾರೆ. 

‘ಎಲ್ಲ ಅತಿಥಿ ಶಿಕ್ಷಕರು ಅಥವಾ ಉಪನ್ಯಾಸಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆಂದು ಪರಿಗಣಿಸಿ ಅವರೆಲ್ಲರಿಗೂ ಸರ್ಕಾರ ಜೂನ್‍ನಿಂದ ಶಾಲಾ ಕಾಲೇಜುಗಳು ಆರಂಭವಾಗುವವರೆಗೂ ಸಂಬಳ ನೀಡಬೇಕು. ಖಾಸಗಿ ಶಾಲಾ–ಕಾಲೇಜುಗಳ ಸಿಬ್ಬಂದಿಗೂ ಸಂಬಳ ನೀಡುವಂತೆ ಖಾಸಗಿ ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡಬೇಕು. ಇದನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸಮಿತಿ ಹೇಳಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.