ಬೆಂಗಳೂರು: ಸವಿತಾ ಸಮಾಜದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸುವಂತೆ ಆಗ್ರಹಿಸಿರುವ ರಾಜ್ಯ ಸವಿತಾ ಸಮಾಜ, ಡಿ.2ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಉಪಾಧ್ಯಕ್ಷ ಡಿ.ಆರ್.ಕೃಷ್ಣ, ‘ಅಂದು ಬೆಳಿಗ್ಗೆ 10 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಿ, ಪ್ರತಿಭಟನೆ ನಡೆಸಲಾಗುವುದು. ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಆನೇಕಲ್ ಮತ್ತು ಮಡಿವಾಳ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕೂಡಲೇ ಅವರನ್ನು ಬಂಧಿಸಬೇಕು’ ಎಂದು ಆಗ್ರಹಿಸಿದರು.

ರಾಜ್ಯ ಸವಿತಾ ಸಮಾಜದ ಮಾಜಿ ಅಧ್ಯಕ್ಷ ಯು.ಕೃಷ್ಣಮೂರ್ತಿ, ಸವಿತಾ ಸಮಾಜದ ಮುಖಂಡರಾದ ವೇಣು ಗೋಪಾಲ, ಸೌಭಾಗ್ಯ, ಲಕ್ಷ್ಮೀ, ಮಂಜೇಶ್ ಗಾಂಧಿ, ರಾಘವೇಂದ್ರ ಶಿಕಾರಿಪುರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.