ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಟೆಲ್‌: ಎಲ್ಲರಿಗೂ ಅವಕಾಶ ಕಲ್ಪಿಸಲು ಸೂಚನೆ

Last Updated 17 ಜುಲೈ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾವಕಾಶ ಬಯಸಿ ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲು ಸೂಚಿಸಿ ಸಮಾಜ ಕಲ್ಯಾಣ ಇಲಾಖೆ ಹೊಸದಾಗಿ ಸುತ್ತೋಲೆ ಹೊರಡಿಸಿದೆ.

ವಸತಿ ನಿಲಯಗಳಲ್ಲಿ ಲಭ್ಯವಿರುವ ಮಂಜೂರಾತಿ ಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲು ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿ ಪ್ರಸಕ್ತ ಸಾಲಿನಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾವಕಾಶ ಬಯಸಿ ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲು ಸರ್ಕಾರ ಸೂಚಿಸಿದೆ. ವಿದ್ಯಾರ್ಥಿ ನಿಲಯಗಳಲ್ಲಿನ ಎಲ್ಲ ವಿದ್ಯಾರ್ಥಿಗಳಿಗೂ ಮೂಲಸೌಲಭ್ಯ ಕಲ್ಪಿಸಲು ‌ತಿಳಿಸಲಾಗಿದೆ.

ಇರುವ ವ್ಯವಸ್ಥೆಯಲ್ಲಿಎಲ್ಲ ವಿದ್ಯಾರ್ಥಿಗಳಿಗೆ ಸೌಲಭ್ಯ ನೀಡುವುದು ಕಷ್ಟ ಎಂಬ ನೆಲೆಯಲ್ಲಿ ಈ ಮೊದಲಿನ ಸುತ್ತೋಲೆ ಹೊರಡಿಸಲಾಗಿತ್ತು. ಹೊಸ ಸುತ್ತೋಲೆಯಿಂದಾಗಿ ಅಗತ್ಯ ಮೂಲಸೌಲಭ್ಯಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT