ಬೆಂಗಳೂರು: ಬೆಂಗಳೂರು ವಕೀಲರ ಸಂಘದ 2025–28ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಕೀಲರಿಗೆ ಶೇಕಡ 18ರಷ್ಟು ಮೀಸಲಾತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಕೀಲರ ಸಂಘ ಒತ್ತಾಯಿಸಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ. ಮುನಿಯಪ್ಪ, ಖಜಾಂಚಿ ಟಿ.ಎಲ್. ನಾಗರಾಜ್, ‘ಬೆಂಗಳೂರು ವಕೀಲರ ಸಂಘವು ಸರ್ಕಾರದಿಂದ ಆರ್ಥಿಕ ಸೌಲಭ್ಯಗಳನ್ನು ಪಡೆಯುತ್ತಾ ಬಂದಿದೆ. ಈ ಸಂಘದ 2025–28ನೇ ಸಾಲಿನ ಅವಧಿ ಪದಾಧಿಕಾರಿಗಳ ಆಯ್ಕೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ 30ರಷ್ಟು ಮೀಸಲಾತಿ ನೀಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಅದರಂತೆಯೇ ಸಂವಿಧಾನದ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಕೀಲರಿಗೆ ಶೇ 18ರಷ್ಟು ಮೀಸಲಾತಿ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

‘ಬೆಂಗಳೂರು ವಕೀಲರ ಸಂಘದಲ್ಲಿ 25 ಸಾವಿರಕ್ಕೂ ಹೆಚ್ಚು ವಕೀಲರು ಸದಸ್ಯರಿದ್ದಾರೆ. ಅದರಲ್ಲಿ 7 ಸಾವಿರದಿಂದ 8ಸಾವಿರದವರೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವೃತ್ತಿಪರ ವಕೀಲರು ಸದಸ್ಯರಿದ್ದಾರೆ. ಈಗ ನಡೆಯುತ್ತಿರುವ ಸಂಘದ ಚುನಾವಣೆಯಲ್ಲಿ ಯಾವುದೇ ಮೀಸಲಾತಿ ಕಲ್ಪಿಸಿಲ್ಲ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಕೀಲರ ಸಂಘವು ಮೀಸಲಾತಿ ಕಲ್ಪಿಸುವಂತೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಬೆಂಗಳೂರು ವಕೀಲರ ಸಂಘದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಕೀಲರಿಗೆ ಮೀಸಲಾತಿ ಕಲ್ಪಿಸುವಂತೆ ಹೈಕೋರ್ಟ್ ಸೂಚಿಸಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.