ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಲು ಆಗ್ರಹ

Last Updated 14 ಜನವರಿ 2022, 17:03 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮದ ಅನುದಾನರಹಿತ ಶಾಲಾ–ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು’ ಎಂದು ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ಆಗ್ರಹಿಸಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಗೌರವಾಧ್ಯಕ್ಷ ಜಲಮಂಗಲ ನಾಗರಾಜು,‘ 1995ರ ನಂತರದ ಅನುದಾನರಹಿತ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸದೆ, ಈಗಿನ ಸರ್ಕಾರಗಳು ಕನ್ನಡ ಭಾಷೆಗೆ ಅವಮಾನ ಮಾಡಿವೆ’ ಎಂದು ದೂರಿದರು.

‘2018ರಲ್ಲಿ ಬಿಜೆಪಿ ಸರ್ಕಾರ ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿತ್ತು. ಕಳೆದ ಅಧಿವೇಶನದಲ್ಲೂ ಈ ಬಗ್ಗೆ ತೀರ್ಮಾನಗಳನ್ನು ಕೈಗೊಳ್ಳಲಾಗಿತ್ತು. ಆದರೆ, ಈವರೆಗೆ ಸಮಸ್ಯೆ ಬಗೆಹರಿದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT