ಬೆಂಗಳೂರು:ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್‌ಆಫ್ ಇಂಡಿಯಾ (ಎಸ್‌ಐಒ) ರಾಜ್ಯ ಘಟಕದ ವತಿಯಿಂದ ಜೂನ್ 20ರವರೆಗೆ 'ಶಾಲೆ ಕಡೆ ನನ್ನ ನಡೆ’ ಶೈಕ್ಷಣಿಕ ಜಾಗೃತಿ ನಡೆಯಲಿದ್ದು, ಬುಧವಾರ ಇಲ್ಲಿ ಚಾಲನೆ ನೀಡಲಾಯಿತು.

ಎಸ್‌ಐಒ ರಾಜ್ಯ ಘಟಕದ ಅಧ್ಯಕ್ಷ ನಿಹಾಲ್ ಕಿದಿಯೂರು ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಿ ಚಾಲನೆ ನೀಡಿದರು. ರಾಜ್ಯದಲ್ಲಿ ಶಾಲೆ ಬಿಟ್ಟ ಎಲ್ಲ ಮಕ್ಕಳನ್ನೂಶಾಲೆಗೆ ಸೇರಿಸಲು ಪ್ರಯತ್ನಿಸುವುದು, ಶೈಕ್ಷಣಿಕ ಗುಣಮಟ್ಟದ ಹೆಚ್ಚಳ ಮತ್ತು ಮೂಲಸೌಕರ್ಯ ಒದಗಿಸಲು ಸರ್ಕಾರವನ್ನು ಒತ್ತಾಯಿಸುವ ಮೂರು ಉದ್ದೇಶ ಈ ಅಭಿಯಾನದ ಹಿಂದೆ ಇದೆ.

‘ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶೈಕ್ಷಣಿಕ ಸಮೀಕ್ಷೆ, ಶಾಲೆ ಬಿಟ್ಟ ಮಕ್ಕಳ ಮನೆಗೆ ಹೋಗಿ ದಾಖಲಾತಿಗೆ ಪ್ರಯತ್ನ, ಶೈಕ್ಷಣಿಕಜಾಗೃತಿ ಕಾರ್ಯಕ್ರಮಗಳು, ಬೀದಿ ನಾಟಕಗಳು, ಸಾರ್ವಜನಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಮಾಧ್ಯಮ ಕಾರ್ಯದರ್ಶಿಯಾಸೀನ್ ಕೋಡಿಬೆಂಗ್ರೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.