ಗುರುವಾರ , ಅಕ್ಟೋಬರ್ 22, 2020
21 °C
ಕೊರೊನಾ ಪರಿಸ್ಥಿತಿ: ಸಲಹೆ ನೀಡುವಂತೆ ಸಚಿವ ಸುರೇಶ್‌ ಕುಮಾರ್‌ ಮನವಿ

ಶಾಲೆ ಆರಂಭ ಸಚಿವರು, ಶಾಸಕರಿಗೆ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುರೇಶ್‌ಕುಮಾರ್

ಬೆಂಗಳೂರು: ಕೊರೊನಾ ಪರಿಸ್ಥಿತಿಯಲ್ಲಿ ಶಾಲಾರಂಭ ಮತ್ತು ಸಮುದಾಯದ ಸಹಕಾರ ಕುರಿತಂತೆ ಸಲಹೆ, ಸೂಚನೆಗಳನ್ನು ನೀಡುವಂತೆ ಎಲ್ಲ ಸಚಿವರು‌ ಮತ್ತು ಶಾಸಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಶಾಲೆಗಳನ್ನು (ಎಲ್‌ಕೆಜಿಯಿಂದ ಪಿಯುಸಿವರೆಗೆ) ಯಾವಾಗ ಆರಂಭಿಸಬಹುದು, ಒಂದು ವೇಳೆ ಆರಂಭಿಸುವುದಾದರೆ ಯಾವ ತರಗತಿಗಳನ್ನು ಮೊದಲು ಆರಂಭಿಸಬಹುದು, ಸಮುದಾಯ ಹಾಗೂ ಜನಪ್ರತಿನಿಧಿಗಳಿಂದ ಶಿಕ್ಷಣ ಇಲಾಖೆ ಯಾವ ರೀತಿಯಿಂದ ಸಹಕಾರ ನಿರೀಕ್ಷಿಸಬಹುದು’ ಎಂಬ ಬಗ್ಗೆ ಸಲಹೆ, ಸೂಚನೆಯನ್ನು ನೀಡುವಂತೆ ಪತ್ರದಲ್ಲಿ ಅವರು ಕೋರಿದ್ದಾರೆ.

‘ಕೊರೊನಾ ಕಾರಣದಿಂದ ಮಾರ್ಚ್‌ನಲ್ಲಿ ಮುಚ್ಚಿದ ಶಾಲೆಗಳನ್ನು ಇನ್ನೂ ತೆರೆಯಲಾಗುತ್ತಿಲ್ಲ. ಜೂನ್‌ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಶಾಲೆಗಳನ್ನು ಮತ್ತೆ ಆರಂಭಿಸಲು ಪೂರ್ವಸಿದ್ಧತೆ, ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್‌ಒಪಿ) ಇಲಾಖೆ ಸಿದ್ಧಪಡಿಸಿಕೊಂಡಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಕೊರೊನಾ ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಸಾಗಿದೆ. ಈ ಪರಿಸ್ಥಿತಿಯ ನಡುವೆಯೇ ಸಾಮಾಜಿಕ ಜೀವನ ತಹಬಂದಿಗೆ ಮರಳಬೇಕಿದೆ. ಕೊರೊನಾ ಕಾರಣಕ್ಕಾಗಿ ಅತ್ಯಂತ ಸಂಕಷ್ಟಕ್ಕೆ ಸಿಲುಕಿರುವುದು ಶಿಕ್ಷಣ ಕ್ಷೇತ್ರವಾಗಿದೆ’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು