ಬುಧವಾರ, ಆಗಸ್ಟ್ 10, 2022
20 °C
ಕೋವಿಡ್‌ ವೇಳೆಯಲ್ಲಿ ಮಕ್ಕಳ ಬಳಕೆಗೆ ಗ್ರಾಮಸ್ಥರ ಅಸಮಾಧಾನ

ತರಾತುರಿಯಲ್ಲಿ ಶಾಲಾ ಕಟ್ಟಡ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಸರಘಟ್ಟ: ಕೊಡಗಿ ತಿರುಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಮತ್ತು ಬಯಲು ರಂಗಮಂದಿರವನ್ನು ತರಾತುರಿಯಲ್ಲಿ ಉದ್ಘಾಟಿಸಿದ್ದು ಏಕೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. 

‘ಶಾಲೆಗಳು ಇನ್ನೂ ಪ್ರಾರಂಭಗೊಂಡಿಲ್ಲ. ಕಟ್ಟಡದ ಕೆಲಸಗಳು ಪೂರ್ಣಗೊಂಡಿಲ್ಲ. ಆದರೂ, ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಲಾಯಿತು. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಸ್ವಾಗತಿಸಲು ಶಾಲಾ ಮಕ್ಕಳು ವಾದ್ಯ ಬಾರಿಸುತ್ತಿದ್ದರು. ಕೋವಿಡ್ ಈ ಸಮಯದಲ್ಲಿ ಶಾಲಾ ಮಕ್ಕಳನ್ನು ಹೀಗೆ ಬಳಸಿಕೊಳ್ಳುವುದು ಎಷ್ಟು ಸರಿ’ ಎಂದು ಬಿಳಿಜಾಜಿ ನಿವಾಸಿ ಗೋವಿಂದರಾಜು ಪ್ರಶ್ನಿಸಿದರು. 

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಅನುದಾನದಿಂದ ಗ್ರಾಮದಲ್ಲಿ ಶಾಲಾ ಕಟ್ಟಡ ಮತ್ತು ಬಯಲು ರಂಗಮಂದಿರವನ್ನು ನಿರ್ಮಿಸಲಾಗಿದೆ. ಅದರೆ ಕನಿಷ್ಠ ಪಕ್ಷ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗ್ರಾಮದ ಹೆಸರನ್ನು ಕಟ್ಟಡದ ಮೇಲೆ ಬರೆಸಿಲ್ಲ ಎಂದು ಗ್ರಾಮದ ನಿವಾಸಿ ಮಂಜುನಾಥ್ ಬೇಸರ ವ್ಯಕ್ತಪಡಿಸಿದರು. 

ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಎಂಜಿನಿಯರ್‌ ಶ್ರೀನಾಥ್, ‘ವಾರದೊಳಗೆ ಶಾಲಾ ಕಟ್ಟಡದ ಮೇಲೆ ಬರಹ ಬರೆಸಲಾಗುವುದು’ ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.