ಸೋಮವಾರ, ಫೆಬ್ರವರಿ 24, 2020
19 °C

ಉರುಳಿ ಬಿದ್ದ ಶಾಲಾ ವಾಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾಬಸ್ ಪೇಟೆ: ಮುದ್ದಲಿಂಗನಹಳ್ಳಿ ಗೇಟ್‌ನ ಅಕ್ಷರ ಅಕಾಡೆಮಿ ಆಫ್ ಎಕ್ಸಲೆನ್ಸ್ ಶಾಲೆಗೆ ಸೇರಿದ ವಾಹನ ಚಾಲಕನ ನಿಯಂತ್ರಣ ತಪ್ಪಿ ಒಬಳಾಪುರದ ಗ್ರಾಮದ ಸಮೀಪ ಉರುಳಿ ಬಿದ್ದು ಚಾಲಕ ತಮ್ಮೇಗೌಡ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಮಂಗಳವಾರ ಸಂಜೆ 5ರ ಸುಮಾರಿಗೆ ಒಬಳಾಪುರ ಗ್ರಾಮದ ಎಲೆಕಲ್ಲು ಬಳಿ ಸ್ಟೇರಿಂಗ್ ಇದ್ದಕ್ಕಿದ್ದ ಹಾಗೆ ಲಾಕ್ ಆಗಿದೆ. ನಿಯಂತ್ರಣ ಕಳೆದುಕೊಂಡ ವಾಹನ ಪಲ್ಟಿ ಹೊಡೆದಿದೆ. ಈ ವೇಳೆ ವಾಹನದಲ್ಲಿ ಮೂವರು ವಿದ್ಯಾರ್ಥಿಗಳು ಇದ್ದರು ಎನ್ನಲಾಗಿದೆ. ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಗಾಯಾಳು ಚಾಲಕನನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು