ಬೆಂಗಳೂರು: ಜೀವಕ್ಕೆ ಆಪತ್ತು ತರುವ ರೀತಿಯಲ್ಲಿ ನಿಗದಿಗಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳನ್ನು ಪತ್ತೆ ಮಾಡಲು ಸಂಚಾರ ಪೊಲೀಸರು ಮಂಗಳವಾರ ವಿಶೇಷ ಕಾರ್ಯಾಚರಣೆ ನಡೆಸಿದರು.

ನಗರದ ಪ್ರಮುಖ ರಸ್ತೆಗಳು ಹಾಗೂ ಒಳ ರಸ್ತೆಗಳಲ್ಲಿ ವಾಹನಗಳನ್ನು ತಡೆದು ತಪಾಸಣೆ ನಡೆಸಿದ ಪೊಲೀಸರು, ನಿಯಮ ಉಲ್ಲಂಘಿಸಿದವರಿಗೆ ಸ್ಥಳದಲ್ಲೇ ದಂಡ ವಿಧಿಸಿದರು. ದಂಡ ಪಾವತಿಸಲು ಸಾಧ್ಯವಾಗದ ಚಾಲಕರಿಗೆ ನೋಟಿಸ್ ನೀಡಿದರು.

‘ಆಟೊ, ಓಮ್ನಿ, ವ್ಯಾನ್ ಹಾಗೂ ಇತರೆ ಪ್ರಕಾರಗಳ ವಾಹನಗಳಲ್ಲಿ ಮಕ್ಕಳನ್ನು ಮನೆಯಿಂದ ಶಾಲೆಗೆ–ಶಾಲೆಯಿಂದ ಮನೆಗೆ ಕರೆದೊಯ್ಯಲಾಗುತ್ತದೆ. ಹಲವು ಚಾಲಕರು ಹಣದ ಆಸೆಗಾಗಿ, ನಿಗದಿಗಿಂತ ಹೆಚ್ಚು ಮಕ್ಕಳನ್ನು ವಾಹನದಲ್ಲಿ ಹತ್ತಿಸಿಕೊಳ್ಳುತ್ತಾರೆ. ಕೆಲವರಂತೂ ಉಸಿರಾಡಲು ಸಾಧ್ಯವಾಗದ ರೀತಿಯಲ್ಲಿ ಮಕ್ಕಳನ್ನು ವಾಹನದಲ್ಲಿ ಕೂರಿಸಿರುತ್ತಾರೆ’ ಎಂದು ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ವಾಹನಗಳು ಅಪಘಾತವಾದರೆ ಅಥವಾ ಯಾವುದಾದರೂ ಅವಘಡ ಸಂಭವಿಸಿದರೆ, ಮಕ್ಕಳು ವಾಹನದಿಂದ ಹೊರಗೆ ಬರಲು ಸಾಧ್ಯವಾಗುವುದಿಲ್ಲ. ಚಾಲಕರ ವರ್ತನೆಯಿಂದ ಮಕ್ಕಳ ಜೀವಕ್ಕೆ ಕುತ್ತು ಬರುವ ಸಂಭವ ಹೆಚ್ಚು. ಇದೇ ಕಾರಣಕ್ಕೆ ವಾಹನಗಳನ್ನು ತಡೆದು ಚಾಲಕರಿಗೆ ದಂಡ ವಿಧಿಸಲಾಗುತ್ತಿದೆ’ ಎಂದು ತಿಳಿಸಿದರು.

ನೋಟಿಸ್ ನೀಡಿ ಎಚ್ಚರಿಕೆ: ‘ಉಪ್ಪಾರಪೇಟೆ, ಹೈಗ್ರೌಂಡ್ಸ್, ಮಲ್ಲೇಶ್ವರ ಹಾಗೂ ಸುತ್ತಮುತ್ತ ಠಾಣೆಗಳ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ, ಸಂಜೆ ಹಾಗೂ ಮಧ್ಯಾಹ್ನ ಪ್ರತ್ಯೇಕ ತಂಡಗಳಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಹಲವು ವಾಹನಗಳಲ್ಲಿ ಹೆಚ್ಚುವರಿಯಾಗಿ ಮಕ್ಕಳನ್ನು ಕೂರಿಸಿಕೊಂಡಿದ್ದು ಕಂಡುಬಂತು’ ಎಂದು ಸಂಚಾರ ಪೊಲೀಸರು ಹೇಳಿದರು.

‘ತಪ್ಪಿತಸ್ಥ ವಾಹನಗಳ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಯಿತು. ಮುಂದಿನ ದಿನಗಳಲ್ಲಿ ಹೆಚ್ಚುವರಿಯಾಗಿ ಮಕ್ಕಳನ್ನು ಕರೆದೊಯ್ಯದಂತೆ ಎಚ್ಚರಿಕೆ ಸಹ ನೀಡಲಾಯಿತು. ವಾಹನಗಳ ಪತ್ತೆ ಕಾರ್ಯಾಚರಣೆ ಮುಂದುವರಿಯಲಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.