ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಶಾಲೆಗಳು ಮತ್ತೆ ಆರಂಭ

1ರಿಂದ 9ನೇ ತರಗತಿ ಆರಂಭ: ಉತ್ತಮ ಪ್ರತಿಕ್ರಿಯೆ: ಮಕ್ಕಳ ಸಂತಸ
Last Updated 31 ಜನವರಿ 2022, 19:47 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಮೂರನೇ ಅಲೆಯ ಕಾರಣಕ್ಕೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿದ್ದ 1ರಿಂದ 9ನೇ ತರಗತಿಗಳನ್ನು ಸೋಮ ವಾರದಿಂದ ಮತ್ತೆ ಆರಂಭಿಸಲಾಗಿದೆ.

ಭೌತಿಕ ತರಗತಿಗಳು ಆರಂಭವಾಗಿ ರುವುದಕ್ಕೆ ಮಕ್ಕಳು ಮತ್ತು ಪೋಷ ಕರು ಸಂತಸ ವ್ಯಕ್ತಪಡಿಸಿದ್ದಾರೆ. ಚಿಣ್ಣರು ಸಂಭ್ರಮದಿಂದ ಶಾಲೆಗೆ ಹಾಜ ರಾಗಿದ್ದರು. ಸ್ನೇಹಿತರನ್ನು ಹಲವು ದಿನಗಳ ಬಳಿಕ ಭೇಟಿಯಾಗಿದ್ದಕ್ಕೆ ಖುಷಿ ಪಟ್ಟು ತರಗತಿಗಳಿಗೆ ಹಾಜರಾದರು.

ಕೋವಿಡ್‌ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುವ ಶಾಲೆ ಗಳನ್ನು ಮಾತ್ರ ಮುಚ್ಚಲು ನಿರ್ಧರಿಸಲಾಗಿದೆ. ಸೋಂಕು ಕಡಿಮೆಯಾದ ಬಳಿಕ ಅಂತಹ ಶಾಲೆಗಳಲ್ಲಿ ಮತ್ತೆ ತರಗತಿ
ಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ.

ಸೋಂಕು ಪಸರಿಸುವಿಕೆ ಪ್ರಮಾಣ ಹೆಚ್ಚಾಗಿದ್ದರಿಂದ ರಾಜ್ಯ ಸರ್ಕಾರ 1ರಿಂದ 9ನೇ ತರಗತಿಗಳನ್ನು ಜನವರಿ 6ರಿಂದ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಶಾಲೆಗಳನ್ನು ಮತ್ತೆ ಆರಂಭಿಸಲು ಸರ್ಕಾರ ಈಗ ಒಪ್ಪಿಗೆ ಸೂಚಿಸಿದೆ. ಕೋವಿಡ್‌ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ತರಗತಿಗಳನ್ನು ನಡೆಸಲು ಸರ್ಕಾರ ನಿರ್ದೇಶನ ನೀಡಿತ್ತು. ಹೀಗಾಗಿ, ಕೊಠಡಿಗಳನ್ನು ಸ್ವಚ್ಛಗೊಳಿಸಿ ತರಗತಿಗಳನ್ನು ಆರಂಭಿಸಲಾಗಿದೆ.

ಶಾಲೆಗೆ ಬಂದ ವಿದ್ಯಾರ್ಥಿಗಳ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಿ, ಕೈಗೆ ಸ್ಯಾನಿಟೈಸರ್‌ ಹಾಕುವ ವ್ಯವಸ್ಥೆ ಮಾಡಲಾಗಿತ್ತು.

‘ಬಹುತೇಕ ಶಾಲೆಗಳಲ್ಲಿ ಶೇಕಡ 70ಕ್ಕಿಂತಲೂ ಹೆಚ್ಚು ಮಕ್ಕಳ ಹಾಜರಾತಿ ಇತ್ತು. ಕೆಲವು ಖಾಸಗಿ ಶಾಲೆಗಳಲ್ಲಿ ಶೇ 100ರಷ್ಟು ಹಾಜರಾತಿ ವರದಿಯಾಗಿದೆ. ಆದರೆ, ಕೆಲವು ಶಾಲೆಗಳು ಬುಧವಾರದಿಂದ ತರಗತಿಗಳನ್ನು ಆರಂಭಿಸಲು ನಿರ್ಧರಿಸಿವೆ. ಆಫ್‌ಲೈನ್‌ ವ್ಯವಸ್ಥೆಯ ಜತೆಗೆ ಆನ್‌ಲೈನ್‌ ಮೂಲಕವೂ ತರಗತಿಗಳು ಮುಂದುವರಿಸಲು ಶಾಲೆಗಳು ನಿರ್ಧರಿಸಿವೆ‘ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

’ವಿದ್ಯಾರ್ಥಿಗಳ ಹಾಜರಾತಿ ಉತ್ತಮವಾಗಿದೆ. ಮಕ್ಕಳು ಉತ್ಸಾಹದಿಂದ ಶಾಲೆಗೆ ಬಂದಿದ್ದಾರೆ. ಮಕ್ಕಳಿಗಿಂತಲೂ ಪೋಷಕರು ಶಾಲೆಗಳು ಆರಂಭವಾಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಅವರೇ ಆಸಕ್ತಿಯಿಂದ ಮಕ್ಕಳನ್ನು ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿದ್ದಾರೆ. ಆನ್‌ಲೈನ್‌ ವ್ಯವಸ್ಥೆಯಿಂದ ಬೇಸತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಖುಷಿಯಾಗಿದೆ‘ ಎಂದು ಕರ್ನಾಟಕ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT