ಬೆಂಗಳೂರು: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನಿಂದ ಡಿಸೆಂಬರ್ 28 ಮತ್ತು 29ರಂದು ಬಾಗಲೂರಿನ ವಿ.ಜೆ. ಇಂಟರ್‌ನ್ಯಾಷನಲ್ ಸ್ಕೂಲ್ ಮೈದಾನದಲ್ಲಿ ‘ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ’ ನಡೆಯಲಿದೆ ಎಂದು ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ತಿಳಿಸಿದರು.
ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸುವ ಉದ್ದೇಶದಿಂದ ನಾಲ್ಕು ವರ್ಷಗಳಿಂದ ನಿರಂತರವಾಗಿ ವೈಜ್ಞಾನಿಕ ಸಮ್ಮೇಳನ ಆಯೋಜಿಸಲಾಗುತ್ತಿದೆ. ಸರ್ಕಾರ ಹಾಗೂ ಅನೇಕ ಸಂಘ–ಸಂಸ್ಥೆಗಳು ಸಮ್ಮೇಳನದ ಯಶಸ್ವಿಗೆ ಕೈಜೋಡಿಸುತ್ತಿವೆ. ಎರಡು ದಿನ ನಡೆಯುವ ಸಮ್ಮೇಳನದಲ್ಲಿ ಜನಪ್ರತಿ ನಿಧಿಗಳು, ಸಂಪನ್ಮೂಲ ವ್ಯಕ್ತಿಗಳು, ಚಿಂತಕರು, ಸಾಹಿತಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ. ಈಗಾಗಲೆ ಸಮ್ಮೇಳನದ ಯಶಸ್ವಿಗೆ ಹಲವಾರು ಸಮಿತಿಗಳನ್ನು ರಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.
‘ಸಮ್ಮೇಳನದಲ್ಲಿ ಗೋಷ್ಠಿಗಳು, ಆಹಾರ ಮೇಳ, ವಸ್ತು ಪ್ರದರ್ಶನ, ಸ್ಮರಣ ಸಂಚಿಕೆ ಬಿಡುಗಡೆ, ಎಚ್.ಎನ್. ಪ್ರಶಸ್ತಿ ಹಾಗೂ ಸಾಧಕ ಪ್ರಶಸ್ತಿಗೆ ಆಹ್ವಾನ ಮೊದಲಾದ ವಿಷಯಗಳ ಕುರಿತು ಚರ್ಚೆ ನಡೆದಿದೆ’ ಎಂದರು.