ಗುರುವಾರ , ಅಕ್ಟೋಬರ್ 24, 2019
21 °C

ಸ್ಕಾರ್ಪಿಯೊ ಡಿಕ್ಕಿ; ಮಹಿಳೆ ಸಾವು

Published:
Updated:

ಬೆಂಗಳೂರು: ಬಸ್‌ನಿಂದ ಇಳಿಯುತ್ತಿದ್ದ ಸಂದರ್ಭದಲ್ಲೇ ಸ್ಕಾರ್ಪಿಯೊ ವಾಹನ ಡಿಕ್ಕಿಯಾಗಿ ಹಬೀಬಿ (42) ಎಂಬುವರು ದುರ್ಮರಣಕ್ಕೀಡಾದ ಘಟನೆ ಸೋಮವಾರ ರಾತ್ರಿ ದೇವನಹಳ್ಳಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

‘ಸ್ಥಳೀಯ ನಿವಾಸಿಯಾಗಿದ್ದ ಹಬೀಬಿ, ಇತ್ತೀಚೆಗೆ ಚಿಕ್ಕಬಳ್ಳಾಪುರಕ್ಕೆ ಹೋಗಿದ್ದರು. ಅಲ್ಲಿಂದ ವಾಪಸು ನಗರಕ್ಕೆ ಬಂದಿದ್ದಾಗಲೇ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.

‘ಹಬೀಬಿ ಅವರಿದ್ದ ಕೆಎಸ್‌ಆರ್‌ಟಿಸಿ ಬಸ್, ರಾತ್ರಿ 8.30ರ ಸುಮಾರಿಗೆ ರಾಣಿ ಕ್ರಾಸ್ ಬಳಿ ಬಂದಿತ್ತು. ಬಸ್‌ ನಿಲ್ಲುತ್ತಿದ್ದಂತೆ ಹಬೀಬಿ ಕೆಳಗೆ ಇಳಿಯುತ್ತಿದ್ದರು. ಅದೇ ವೇಳೆ ವೇಗವಾಗಿ ಬಂದ ಸ್ಕಾರ್ಪಿಯೊ ವಾಹನ ಗುದ್ದಿತ್ತು. ರಸ್ತೆ ಮೇಲೆ ಬಿದ್ದ ಹಬೀಬಿ ಮೈ ಮೇಲೆಯೇ ಹರಿದ ಸ್ಕಾರ್ಪಿಯೊ 20 ಅಡಿ ದೂರದವರೆಗೆ ಉಜ್ಜಿಕೊಂಡು ಹೋಗಿತ್ತು. ತೀವ್ರವಾಗಿ ಗಾಯಗೊಂಡ ಹಬೀಬಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

‘ರಸ್ತೆಯಲ್ಲಿ ನಿರ್ಲಕ್ಷ್ಯದಿಂದ ಬಸ್ ನಿಲ್ಲಿಸಿದ್ದ ಕೆಎಸ್‌ಆರ್‌ಟಿಸಿ ಚಾಲಕ ಹಾಗೂ ನಿರ್ಲಕ್ಷ್ಯದಿಂದ ಸ್ಕಾರ್ಪಿಯೊ ಓಡಿಸಿ ಮಹಿಳೆ ಸಾವಿಗೆ ಕಾರಣನಾದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದರು. 

ಪಾದಚಾರಿ ಸಾವು: ಕೆ.ಆರ್. ಪುರ ಸಂಚಾರ ಠಾಣೆ ವ್ಯಾಪ್ತಿಯ ಎಂ.ಡಿ. ಪುರ ವರ್ತುಲ ರಸ್ತೆಯಲ್ಲಿ ದ್ವಿಚಕ್ರವಾಹನ ಗುದ್ದಿದ್ದರಿಂದ ಗಾಯಗೊಂಡಿದ್ದ ನಾರಾಯಣಪ್ಪ (50) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಬೌರಿಂಗ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಸೆಪ್ಟೆಂಬರ್ 12ರಂದು ಬೆಳಿಗ್ಗೆ ನಾರಾಯಣಪ್ಪ ಅವರಿಗೆ ದ್ವಿಚಕ್ರ ವಾಹನ ಗುದ್ದಿತ್ತು. 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)