ಬೆಂಗಳೂರು: ಕೋವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಪರಿಹಾರ ಕ್ರಮಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಶಾಖೆಯು ಕೈ ಜೋಡಿಸಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಸಹಕಾರ ನೀಡಲು ಸಿದ್ಧವಿದೆ ಎಂದು ಸಂಸ್ಥೆಯ ಮುಖ್ಯ ಆಯುಕ್ತ ಪಿ.ಜಿ. ಆರ್. ಸಿಂಧ್ಯ ತಿಳಿಸಿದ್ದಾರೆ.
’ರಾಜ್ಯದಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಮುಖಂಡರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸ್ಕೌಟ್–ಗೈಡ್ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ವರ್ಷ ಸಂಸ್ಥೆಯ ವತಿಯಿಂದ 40 ಲಕ್ಷ ಮಾಸ್ಕ್ ಸಿದ್ಧಪಡಿಸಿ ವಿತರಿಸಲಾಗಿತ್ತು. ಅಲ್ಲದೆ, ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ₹1 ಕೋಟಿ ನೀಡಲಾಗಿತ್ತು‘ ಎಂದು ಅವರು ಹೇಳಿದ್ದಾರೆ.
’ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿರುವ ಸಂಸ್ಥೆಯ ತರಬೇತಿ ಕೇಂದ್ರಗಳನ್ನು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಬಳಸಿಕೊಳ್ಳಬಹುದಾಗಿದೆ‘ ಎಂದೂ ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.