ಶುಕ್ರವಾರ, ಜೂನ್ 25, 2021
22 °C

ಸ್ಕೌಟ್ಸ್‌ ತರಬೇತಿ ಸಂಸ್ಥೆ ಆರೈಕೆ ಕೇಂದ್ರಗಳಾಗಲಿ: ಪಿ.ಜಿ.ಆರ್. ಸಿಂಧ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ‘ರಾಜ್ಯದಲ್ಲಿರುವ ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ ತರಬೇತಿ ಕೇಂದ್ರಗಳನ್ನು ಕೋವಿಡ್ ಆರೈಕೆ ಕೇಂದ್ರಗಳನ್ನಾಗಿ ಮಾರ್ಪಡಿಸಿ ಚಿಕಿತ್ಸಾ ಕೇಂದ್ರಗಳಂತೆ ಬಳಸಿಕೊಳ್ಳಬಹುದು’ ಎಂದು ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ‘ರಾಜ್ಯದ ಕೆಲವು ಜಿಲ್ಲಾ ಕೇಂದ್ರಗಳಲ್ಲಿ ಸಂಸ್ಥೆಯ ತರಬೇತಿ ಕೇಂದ್ರಗಳಿವೆ. ಈ ಕೇಂದ್ರಗಳನ್ನು ಕೋವಿಡ್‌ ನಿರ್ವಹಣೆಗೆ ಬಳಸಿಕೊಳ್ಳುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದೂ ಅವರು ಕೋರಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದಾವಣಗೆರೆ ಜಿಲ್ಲೆಯ ಕೊಂಡಜ್ಜಿ, ಧಾರವಾಡ, ವಿಜಯಪುರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಸಂಸ್ಥೆಯ ತರಬೇತಿ ಕೇಂದ್ರಗಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು