ಬೆಂಗಳೂರು: ಯುಪಿಎಸ್ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯಿಂದ ₹4 ಲಕ್ಷ ಮೌಲ್ಯದ 51 ವಿವಿಧ ಕಂಪನಿಯ ಬ್ಯಾಟರಿಗಳು ಹಾಗೂ ಒಂದು ಆಟೊರಿಕ್ಷಾ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಕಂಪನಿಯ ವ್ಯವಸ್ಥಾಪಕರೊಬ್ಬರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಶಾಂತಿಪುರ ಮುಖ್ಯರಸ್ತೆ ಸೇರಿದಂತೆ ವಿವಿಧೆಡೆ ಬ್ಯಾಟರಿಗಳನ್ನು ಆರೋಪಿ ಕಳ್ಳತನ ಮಾಡಿದ್ದ. ಕೊಪ್ಪ-ಬೇಗೂರು ಮುಖ್ಯರಸ್ತೆಯ ವಡ್ಡರಪಾಳ್ಯದಲ್ಲಿ ಇರುವ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.