‘ಎಸ್ಟಿಗೆ ಸೇರ್ಪಡೆಗಾಗಿ ಹೋರಾಟ ಅನಿವಾರ್ಯ’

ಕೆ.ಆರ್.ಪುರ: ‘ಅತ್ಯಂತ ಹಿಂದುಳಿದಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಹೋರಾಟ ಆರಂಭಿಸುವ ಅನಿವಾರ್ಯತೆ ಇದೆ’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ರಾಮಚಂದ್ರಪ್ಪ ಹೇಳಿದರು.
ಕೆ.ಆರ್.ಪುರದ ಮೇಡಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಸಂಘದ ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು.
‘ಹಿಂದುಳಿದಿರುವ ಇನ್ನೂರಕ್ಕೂ ಹೆಚ್ಚು ಜಾತಿಗಳಲ್ಲಿ ಕುರುಬ ಸಮಾಜವೂ ಒಂದು. ಮುಂದುವರಿದ ಸಮುದಾಯಗಳು ನಮ್ಮ ಹಕ್ಕು ಕಸಿದುಕೊಳ್ಳುತ್ತಿವೆ’ ಎಂದರು.
‘ಉತ್ತರ ಕರ್ನಾಟಕದಲ್ಲಂತೂ ಕುರುಬ ಸಮಾಜದ ಜನ ಹೀನಾಯ ಸ್ಥಿತಿಯಲ್ಲಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿ ಶೈಕ್ಷಣಿಕ, ಆರ್ಥಿಕ, ರಾಜಕೀಯ ಸವಲತ್ತುಗಳನ್ನು ದೊರಕಿಸಿಕೊಡಲು ಕುರುಬರ ಸಂಘದಿಂದ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.