ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಆರನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯನ್ನು ಜನವರಿ 20 ಹಾಗೂ 21ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿದೆ ಎಂದು ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಇಲ್ಯಾಸ್ ತುಂಬೆ ತಿಳಿಸಿದರು.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎರಡು ದಿನ ನಡೆಯುವ ಈ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಹಾಗೂ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಲಿದೆ. ಇದರ ಜೊತೆಗೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ, ಪಕ್ಷದ ರಾಜಕೀಯ ನಿಲುವು ಮತ್ತು ಭವಿಷ್ಯದ ತಂತ್ರಗಳ ಕುರಿತು ಚರ್ಚೆಗಳು ನಡೆಯಲಿವೆ’ ಎಂದು ಮಾಹಿತಿ ನೀಡಿದರು.

ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಜಾ ಫರಂಗಿಪೇಟೆ, ಎಸ್ಡಿಪಿಐ ರಾಜ್ಯ ಘಟಕದ ಉಪಾಧ್ಯಕ್ಷ ಪುಟ್ಟನಂಜಯ್ಯ, ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಸುದ್ದಿಗೋಷ್ಠಿಯಲ್ಲಿದ್ದರು.