ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮ್ಮವಾರಿ ಸಂಘದ ಅಧ್ಯಕ್ಷರ ಮನೆ‌ಯಲ್ಲಿ ಐ.ಟಿ ಅಧಿಕಾರಿಗಳಿಂದ ಶೋಧ

crime
Published 7 ಮೇ 2023, 5:41 IST
Last Updated 7 ಮೇ 2023, 5:41 IST
ಅಕ್ಷರ ಗಾತ್ರ

ಬೆಂಗಳೂರು: ಕಮ್ಮವಾರಿ ಸಂಘದ ಅಧ್ಯಕ್ಷ ರಾಜಗೋಪಾಲ್ ನಾಯ್ಡು ಅವರ ಮನೆ ಮೇಲೆ ಶನಿವಾರ ದಾಳಿ ಮಾಡಿರುವ ಆದಾಯ ತೆರಿಗೆ (ಐ.ಟಿ.) ಇಲಾಖೆ ಅಧಿಕಾರಿ, ಶೋಧ ನಡೆಸುತ್ತಿದ್ದಾರೆ.

ಬಸವನಗುಡಿಯಲ್ಲಿರುವ ನಾಯ್ಡು ಮನೆ ಮೇಲೆ ಶನಿವಾರ ಬೆಳಿಗ್ಗೆ 15ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿಮಾಡಿದೆ. ತಡ ರಾತ್ರಿಯವರೆಗೂ ಶೋಧ ಮುಂದುವರಿದಿತ್ತು.

'ರಾಜಗೋಪಾಲ್ ನಾಯ್ಡು ಬಸವನಗುಡಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪ್ರಮುಖ ನಾಯಕರಿಗೆ ಆಪ್ತರಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಆರೋಪದ ಮೇಲೆ ದಾಳಿ‌ ನಡೆಸಲಾಗಿದೆ. ಶೋಧ ಕಾರ್ಯ ಪ್ರಗತಿಯಲ್ಲಿದೆ' ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT