ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲಂಬೊ ವಿಮಾನದಲ್ಲಿ ಶೋಧ; ಫೆಮಾ ಉಲ್ಲಂಘನೆ

Last Updated 28 ಫೆಬ್ರುವರಿ 2020, 19:54 IST
ಅಕ್ಷರ ಗಾತ್ರ

ಬೆಂಗಳೂರು: ‘ಅನುಮಾನಾಸ್ಪದ ವಸ್ತುಗಳನ್ನು ಸಾಗಿಸಲಾಗುತ್ತಿದೆ’ ಎಂಬ ಮಾಹಿತಿ ಮೇರೆಗೆ ಏರ್‌ ಕಾರ್ಗೊ ಇಂಟಲಿಜೆನ್ಸ್ ವಿಭಾಗದ ಅಧಿಕಾರಿಗಳು, ಬೆಂಗಳೂರಿನಿಂದ ಕೊಲಂಬೊಗೆ ಹೊರಡಲು ಸಜ್ಜಾಗಿದ್ದ ವಿಮಾನದಲ್ಲಿ ಶುಕ್ರವಾರ ತಪಾಸಣೆ ನಡೆಸಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣದಲ್ಲಿ ನಿಂತಿದ್ದ ವಿಮಾನದಲ್ಲಿ 76 ಪ್ರಯಾಣಿಕರು ಇದ್ದರು. ವಿಮಾನದೊಳಗೆ ತೆರಳಿದ ಅಧಿಕಾರಿಗಳು, ಪ್ರತಿಯೊಬ್ಬರ ಗುರುತಿನ ಚೀಟಿ ಹಾಗೂ ಬ್ಯಾಗ್‌ಗಳನ್ನು ಪರಿಶೀಲಿಸಿದರು.

‘ಅನುಮಾನಾಸ್ಪದವಾಗಿ ಕಂಡುಬಂದ 26 ಪ್ರಯಾಣಿಕರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದರು. ಈ ವೇಳೆ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿ ಸಾಗಿಸುತ್ತಿದ್ದ ₹ 25 ಸಾವಿರ ನಗದು ಪತ್ತೆಯಾಯಿತು’ ಎಂದು ಮೂಲಗಳು ತಿಳಿಸಿವೆ.

‘ಹಣ ತೆಗೆದುಕೊಂಡು ಆರೋಪಿಗಳು ಕ್ಯಾಸಿನೊ ಆಡಲು ಕೊಲಂಬೊಗೆ ಹೊರಟಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT