ಬೆಂಗಳೂರು: ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಿಸುವ ಬಗ್ಗೆ ಸಾಧ್ಯಾಸಾಧ್ಯತೆ ವರದಿ ಸಲ್ಲಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಸೂಚಿಸಿದರು.

ಅಧಿಕಾರಿಗಳ ಜೊತೆ ಗುರುವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ದೆಹಲಿ ಮತ್ತು ಮುಂಬೈಯಲ್ಲಿರುವ ವಿಮಾನ ನಿಲ್ದಾಣಗಳ ನಂತರ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಮೂರನೇ ಅತಿ ದಟ್ಟಣೆಯ ವಿಮಾನ ನಿಲ್ದಾಣವಾಗಿದೆ. ಕಳೆದ ಸಾಲಿನಲ್ಲಿ ಇಲ್ಲಿ 37.5 ದಶಲಕ್ಷ ಪ್ರಯಾಣಿಕರು ಮತ್ತು 4 ಲಕ್ಷ ಟನ್ಗೂ ಹೆಚ್ಚಿನ ಸರಕು ಸಾಗಣೆಯಾಗಿದೆ. ಈ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದಲ್ಲಿ ಎರಡನೇ ವಿಮಾನ ನಿಲ್ದಾಣದ ಅಗತ್ಯವಿದೆ’ ಎಂದರು.

‘ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಾಗ ಬಿಐಎಎಲ್ ಸಂಸ್ಥೆ, ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡು 25 ವರ್ಷಗಳವರೆಗೆ (ಅಂದರೆ 2033) 150 ಕಿ.ಮೀ. ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದಿಲ್ಲ ಎಂದು ಹೇಳಿತ್ತು. ಈ ಷರತ್ತು ಒಂಬತ್ತು ವರ್ಷಗಳಲ್ಲಿ ಮುಗಿಯಲಿದೆ. ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳಿಗೆ ದೀರ್ಘ ಸಮಯ ಹಿಡಿಯುತ್ತದೆ. ಹೀಗಾಗಿ ನಾವು ಈಗಿನಿಂದಲೇ ಕಾರ್ಯಪ್ರವೃತ್ತರಾಗುತ್ತಿದ್ದೇವೆ. ಎರಡನೆಯ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸುವುದರಿಂದ ರಾಜಧಾನಿಯ ಆಚೆಗೂ ಕೈಗಾರಿಕಾ ಬೆಳವಣಿಗೆ ಸಾಧ್ಯವಾಗಲಿದೆ’ ಎಂದರು.

‘ಬೆಂಗಳೂರಿನ ಜನಸಂಖ್ಯೆ ಈಗಾಗಲೇ ಒಂದು ಕೋಟಿ ದಾಟಿದೆ. ಇಲ್ಲಿ ಜಾಗತಿಕ ಮಟ್ಟದ ಕಂಪನಿಗಳಿವೆ. ಸುತ್ತಮುತ್ತಲಿನ ಜಿಲ್ಲೆಗಳ ಜತೆಗೆ ಆಂಧ್ರಪ್ರದೇಶದ ಕೆಲವು ಜಿಲ್ಲೆಗಳ ಜನರೂ ಈಗಿರುವ ವಿಮಾನ ನಿಲ್ದಾಣದ ಮೇಲೆ ಅವಲಂಬಿತರಾಗಿದ್ದಾರೆ. 2033ರ ಹೊತ್ತಿಗೆ ಈಗಿನ ವಿಮಾನ ನಿಲ್ದಾಣವು ಪ್ರಯಾಣಿಕರ ನಿರ್ವಹಣೆಯ ತುತ್ತತುದಿ ಮುಟ್ಟಲಿದೆ. ಸರಕು ಸಾಗಣೆ ಪ್ರಮಾಣ ಕೂಡ 2040ರ ವೇಳೆಗೆ ಆ ಮಟ್ಟ ತಲುಪಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.