ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಪರೀಕ್ಷೆ–2: ವಿದ್ಯಾರ್ಥಿಗಳಿಗೆ ಪ್ರಯಾಣ ಉಚಿತ

Published 25 ಏಪ್ರಿಲ್ 2024, 15:09 IST
Last Updated 25 ಏಪ್ರಿಲ್ 2024, 15:09 IST
ಅಕ್ಷರ ಗಾತ್ರ

ಬೆಂಗಳೂರು:ದ್ವಿತೀಯ ಪಿಯುಸಿ ಪರೀಕ್ಷೆ–2ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ.

ಏ.29ರಿಂದ ಮೇ 16ರ ವರೆಗೆ ಪರೀಕ್ಷೆ ನಡೆಯುವ ದಿನಗಳಂದು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮತ್ತು ಅಲ್ಲಿಂದ ಹಿಂದಿರುಗುವ ವೇಳೆ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿ ಪ್ರಯಾಣಿಸಬಹುದು.

ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ, ಬಿಎಂಟಿಸಿಯ ಸಾಮಾನ್ಯ ಸೇವಾ ಬಸ್‌ಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚುವರಿ ಟ್ರಿಪ್‌ಗಳ ಅಗತ್ಯ ಕಂಡು ಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ನಿಷೇಧಾಜ್ಞೆ: ದ್ವಿತೀಯ ಪಿಯುಸಿ ಪರೀಕ್ಷೆ–2 ಸುಸೂತ್ರವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್‌ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯವಾಗುವಂತೆ ಏ.29ರಿಂದ ಮೇ 16ರವರೆಗೆ ನಿಷೇಧಾಜ್ಞೆ ಹೇರಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್‌ ಬಿ. ದಯಾನಂದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT