ಶನಿವಾರ, ಜುಲೈ 24, 2021
27 °C

ಪಾದರಾಯನಪುರದಲ್ಲಿ ನಿಷೇಧಾಜ್ಞೆ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಪಾದರಾಯನಪುರದಲ್ಲಿ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪಾದರಾಯನಪುರಕ್ಕೆ ಭಾನುವಾರ ಸಂಜೆ ಭೇಟಿ ನೀಡಿದ್ದ ಭಾಸ್ಕರ್ ರಾವ್, ಮೆರವಣಿಗೆ ಹಾಗೂ ಅದನ್ನು ಸಂಘಟಿಸಿದ್ದವರ ಬಗ್ಗೆ ಮಾಹಿತಿ ಪಡೆದುಕೊಂಡರು. 

ಸುದ್ದಿಗಾರರ ಜೊತೆ ಮಾತನಾಡಿದ ಭಾಸ್ಕರ್ ರಾವ್, ‘ಮೆರವಣಿಗೆ ಮಾಡಿರುವುದು ತಪ್ಪು‌. ಇದು ಬೇಜವಾಬ್ದಾರಿ ನಡೆ. ಈಗಾಗಲೇ ಕಾರ್ಪೊರೇಟರ್‌ ಅವರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರ ಲೋಪವಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಸದ್ಯ ಮುಂಜಾಗ್ರತಾ ಕ್ರಮವಾಗಿ ಜಗಜೀವನರಾಮ್ ನಗರ ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು