ಬೆಂಗಳೂರು: ಚುನಾವಣಾ ಆಯೋಗವು ನಡೆಸುತ್ತಿರುವ ‘ಎಸ್ಐಆರ್’ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ವಿರೋಧಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರಗತಿಪರ ಸಂಘಟನೆಗಳ ಮತ್ತು ಜಾತ್ಯತೀತ ಪಕ್ಷಗಳ ಒಕ್ಕೂಟವು ಶನಿವಾರ ಪ್ರತಿಭಟನೆ ನಡೆಸಿತು.

ಚುನಾವಣಾ ಆಯೋಗ ಕನಿಷ್ಠ ನಾಲ್ಕು ಬದಲಾವಣೆಗಳನ್ನು ಒಪ್ಪಲೇ ಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿ ಎಸ್ಐಆರ್ ಜಾರಿ ಮಾಡಲು ಬಿಡುವುದಿಲ್ಲ ಎಂದು ಪ್ರತಿಭಟನಕಾರರು ಎಚ್ಚರಿಸಿದರು.

‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ತಂತ್ರಾಂಶ ಬಳಸಬಾರದು. ಕರಡು ಪಟ್ಟಿ ತಯಾರಾದ ನಂತರ ಕಡ್ಡಾಯವಾಗಿ ಗ್ರಾಮ ಸಭೆ ಕರೆದು ಸಾರ್ವಜನಿಕ ಪರಿಶೀಲನೆ ನಡೆಸಿಯೇ ಪಟ್ಟಿ ಅಂತಿಮಗೊಳಿಸಬೇಕು. ಮತದಾರರ ಪಟ್ಟಿಯನ್ನು ಮಷಿನ್– ರೀಡಬಲ್ ಫಾರ್ಮ್ಯಾಟ್ ಕೊಡುವ ಮೂಲಕ ಪಾರದರ್ಶಕತೆ ಪಾಲಿಸಬೇಕು. ಮೇಲ್ಮನವಿ ಸಲ್ಲಿಸಲು ಹಾಗೂ ಅಗತ್ಯ ದಾಖಲೆ ಒದಗಿಸಲು ಕನಿಷ್ಠ ಆರು ತಿಂಗಳ ಸಮಯಾವಕಾಶ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಈ ನಾಲ್ಕು ಪ್ರಜಾತಾಂತ್ರಿಕ ಹಾಗೂ ಜನಸ್ನೇಹಿ ಕ್ರಮಗಳಿಗೆ ಒಪ್ಪಿದರೆ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಒಂದು ವೇಳೆ ಒಪ್ಪದಿದ್ದರೆ ಅಸಹಕಾರ ಎದುರಿಸಬೇಕಾಗುತ್ತದೆ ಎಂದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಹೋರಾಟಗಾರರಾದ ನೂರ್ ಶ್ರೀಧರ್, ಕೆ.ವಿ.ಭಟ್, ವಿನಯ್ ಶ್ರೀನಿವಾಸ್, ಅರುಣ್ ಲೂಯಿಸ್, ಶಿವಸುಂದರ್, ಯೂಸಫ್ ಕನ್ನಿ, ಅಮ್ಜದ್ ಪಾಷಾ, ನಿಷಾ ಗೂಳೂರು, ಸುರೇಶ್ ಬೆಲ್ಲಂಕೊಂಡ, ಮಲ್ಲಿಗೆ ಸಿರಿಮನೆ, ತಾಹೇರ್ ಹುಸೇನ್, ರಘುನಂದನ್, ರವಿ ಮೋಹನ್, ನಾಗೇಶ್ ಅರಳಕುಪ್ಪೆ, ತನ್ವೀರ್ ಅಹ್ಮದ್ ಭಾಗವಹಿಸಿದ್ದರು.

ಪರಿಣಾಮಕಾರಿ ಕ್ರಮಕ್ಕೆ ಆಗ್ರಹ

‘ಎಸ್ಐಆರ್ ವಿಷಯದಲ್ಲಿ ರಾಜ್ಯ ಸರ್ಕಾರ ಸಹ ಮತದಾರರ ಹಿತ ಕಾಯಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ವಿಶೇಷ ಗ್ರಾಮ ಸಭೆ ಮತ್ತು ವಾರ್ಡ್ ಸಭೆಗಳನ್ನು ಕರೆದು ಮತದಾರರ ಪಟ್ಟಿಯ ಮುಕ್ತ ಪರಿಶೀಲನೆ ಮಾಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ‘ಅರ್ಹ ಮತದಾರರಿಗೆ ಸ್ಮಾರ್ಟ್ ಕಾರ್ಡ್ ನೀಡಬೇಕು. ದಾಖಲೆ ಇಲ್ಲದವರಿಗೆ ದಾಖಲೆ ಒದಗಿಸುವ ಕೆಲಸ ಮಾಡಬೇಕು. ಆಯೋಗ 15 ದಿನದೊಳಗೆ ಸಕರಾತ್ಮಕವಾಗಿ ಸ್ಪಂದಿಸದಿದ್ದರೆ ಮತ್ತು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಎಸ್ಐಆರ್ ತರಬೇತಿ ಪ್ರಾರಂಭವಾಗುವ ಜೂನ್ 20 ರಂದು ಪ್ರತಿರೋಧ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.