ಬೆಂಗಳೂರು: ನಕಲಿ ಆಭರಣ ಮಾರಾಟ ಮಾಡುವ ನೆಪದಲ್ಲಿ ಆರು ಮಹಿಳೆಯರ ತಂಡವು ಯಶವಂತಪುರದ ವಸತಿ ಸಮುಚ್ಚಯದ ನೇಪಾಳದ ಭದ್ರತಾ ಸಿಬ್ಬಂದಿ ಮನೆಯಲ್ಲಿ ₹20 ಸಾವಿರ ನಗದು ಹಾಗೂ ಚಿನ್ನಾಭರಣ ಕಳವು ಮಾಡಿ, ಪರಾರಿಯಾಗಿದೆ.

ಭದ್ರತಾ ಸಿಬ್ಬಂದಿಯ ದೂರು ಆಧರಿಸಿ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಶವಂತಪುರ ಪ್ರದೇಶದ ಗೋಲ್ಡನ್ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದ್ದು, ಉತ್ತರ ಕರ್ನಾಟಕ ಶೈಲಿಯ ಕೃತಕ ಆಭರಣಗಳನ್ನು ಮಾರಾಟದ ನೆಪದಲ್ಲಿ ಮಹಿಳೆಯರು ಅಪಾರ್ಟ್ಮೆಂಟ್ಗೆ ಪ್ರವೇಶಿಸಲು ಯತ್ನಿಸಿದ್ದರು. ಆದರೆ, ಭದ್ರತಾ ಸಿಬ್ಬಂದಿ ಅವರನ್ನು ಒಳಗೆ ಬಿಡಲು ನಿರಾಕರಿಸಿದ್ದಾರೆ. ಈ ಪೈಕಿ ಇಬ್ಬರು ಮಹಿಳೆಯರು ಅವರ ಗಮನ ಬೇರೆಡೆ ಸೆಳೆದಿದ್ದಾರೆ. ಆಗ, ಇನ್ನಿಬ್ಬರು ಒಳಗೆ ನುಗ್ಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ನೆಲ ಮಹಡಿಯಲ್ಲಿರುವ ಭದ್ರತಾ ಸಿಬ್ಬಂದಿ ಮನೆಗೆ ನುಗ್ಗಿ ನಗದು ಮತ್ತು ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ. ಈ ಘಟನೆಯ ದೃಶ್ಯಾವಳಿಗಳು ಅಪಾರ್ಟ್ಮೆಂಟ್ನ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.