ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೆಕ್ಯೂರಿಟಿ ಗಾರ್ಡ್‌ಗಳ ಅಪಹರಿಸಿ ಸುಲಿಗೆ: ಇಬ್ಬರ ಬಂಧನ

Published 18 ಜೂನ್ 2024, 14:32 IST
Last Updated 18 ಜೂನ್ 2024, 14:32 IST
ಅಕ್ಷರ ಗಾತ್ರ

ಬೆಂಗಳೂರು: ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನು ಅಪಹರಿಸಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ತೌಹಿದ್(26), ಶ್ಯಾಂಪುರ ಮುಖ್ಯರಸ್ತೆ ಮೊಹಮ್ಮದ್ ವಾಹಿದ್ ಅಲಿಯಾಸ್ ಸ್ನೇಕ್ ವಾಹಿದ್ (23) ಬಂಧಿತರು.‌

ಬಂಧಿತರಿಂದ ಎರಡು ಬೈಕ್, ಐದು ಮೊಬೈಲ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಬೈಕ್‌ನಲ್ಲಿ ಹೋಗುತ್ತಿದ್ದ ಅಸ್ಸಾಂನ ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನು ಮತ್ತೊಂದು ಬೈಕ್‌ನಲ್ಲಿ ಬಂದ ಆರೋಪಿಗಳು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಅವರನ್ನು ಅಪಹರಣ ಮಾಡಿದ್ದರು. ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ದಿಗ್ಬಂಧನ ವಿಧಿಸಿದ್ದರು. ಬಳಿಕ ಅವರಿಂದ ಮೊಬೈಲ್, ನಗದು, ಬೈಕ್ ಕಳವು ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಚಿಕನ್ ಅಂಗಡಿಯೊಂದರಲ್ಲಿ ಆರೋಪಿಗಳು ಕೆಲಸ ಮಾಡುತ್ತಿದ್ದರು. ವಿಲಾಸಿ ಜೀವನಕ್ಕಾಗಿ ಕೃತ್ಯ ಎಸಗಿರುವುದು ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT