ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೊಡ್ಡಬ್ಯಾಲಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ವಿಜಯಕುಮಾರ್‌ ಆಯ್ಕೆ

Published 29 ಆಗಸ್ಟ್ 2024, 16:11 IST
Last Updated 29 ಆಗಸ್ಟ್ 2024, 16:11 IST
ಅಕ್ಷರ ಗಾತ್ರ

ಯಲಹಂಕ: ದೊಡ್ಡಬ್ಯಾಲಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆರ್‌.ವಿಜಯಕುಮಾರ್‌ ಮತ್ತು ಉಪಾಧ್ಯಕ್ಷರಾಗಿ ಎಂ.ಕೆ.ಮಹೇಶ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕಾಗಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಈ ಹಿಂದೆ ಎರಡು ಬಾರಿ ದೊಡ್ಡಬ್ಯಾಲಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿದ್ದ ವಿಜಯಕುಮಾರ್‌ ಅವರು, ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದರು.

ಶಾಸಕ ಎಸ್‌.ಆರ್‌.ವಿಶ್ವನಾಥ್‌, ಸಿಂಗನಾಯಕನಹಳ್ಳಿ ರೈತರಸೇವಾ ಸಹಕಾರ ಬ್ಯಾಂಕಿನ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್‌, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಬ್ಯಾಲಕೆರೆ ವೆಂಕಟೇಶ್‌, ಕೆ.ಸಿ.ಬಾಬು, ಬಿ.ಆರ್‌.ಲೋಕೇಶ್‌, ಸಂಘದ ನಿರ್ದೇಶಕರಾದ ಮಂಜಣ್ಣ, ಬಿ.ಕೆ.ಶಿವರಾಜ್‌, ಎ.ರಾಜಣ್ಣ, ಲಕ್ಷ್ಮಣ, ಪಾರಿಜಾತ ಚಂದ್ರಪ್ಪ, ಶಾಂತಾ, ರತ್ನಮ್ಮ, ಆಂಜಿನಮ್ಮ, ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT