ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿರ್ವಹಣೆ; ವಿಚಾರ ಸಂಕಿರಣ ಇಂದು

Last Updated 18 ಫೆಬ್ರುವರಿ 2021, 21:04 IST
ಅಕ್ಷರ ಗಾತ್ರ

ಬೆಂಗಳೂರು: ವಿಕೋಪ ಪರಿಸ್ಥಿತಿ ಎದುರಿಸಲು ಬೇಕಾದ ಸಿದ್ಧತೆ ಮತ್ತು ಅದನ್ನು ನಿರ್ವಹಿಸುವುದಕ್ಕೆ ಬೇಕಾದ ಕ್ರಮಗಳು ಕುರಿತು ನಗರದ ದಯಾನಂದ ಸಾಗರ ಕಾಲೇಜಿನಲ್ಲಿ ಶುಕ್ರವಾರ (ಫೆ.19) ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.

ಕೋವಿಡ್‌ ನಿರ್ವಹಣೆ ಮತ್ತು ಇಂತಹ ವಿಕೋಪಗಳನ್ನು ಎದುರಿಸಲು ಬೇಕಾದ ಕ್ರಮಗಳ ಬಗ್ಗೆ ಚರ್ಚೆ, ಉಪನ್ಯಾಸ ನಡೆಯಲಿದೆ. ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದಿಂದ ಹಮ್ಮಿಕೊಂಡಿರುವ ಈ ವಿಚಾರ ಸಂಕಿರಣವನ್ನು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಮುಖ್ಯಸ್ಥ ಡಾ. ಎಂ.ಕೆ. ಸುದರ್ಶನ್ ಉದ್ಘಾಟಿಸಲಿದ್ದಾರೆ. ಐಐಟಿ ಗುವಾಹಟಿಯ ಡಾ. ಟಿ.ಜಿ. ಸೀತಾರಾಮನ್‌ ಮುಖ್ಯ ಭಾಷಣ ಮಾಡಲಿದ್ದು, ಇಂಡಿಯನ್‌ ವಾಟರ್‌ ವರ್ಕ್ಸ್‌ ಅಸೋಸಿಯೇಷನ್‌ನ ಬೆಂಗಳೂರು ಕೇಂದ್ರದ ಮುಖ್ಯಸ್ಥ ಬಿ.ಶ್ರೀನಿವಾಸ ರೆಡ್ಡಿ ಉಪನ್ಯಾಸ ನೀಡಲಿದ್ದಾರೆ.

ತಜ್ಞರಾದ ಡಾ.ವಿ.ಎಸ್. ಪ್ರಕಾಶ್, ಡಾ. ಜಿ.ಎನ್. ನಾಗೇಶ್ ಮತ್ತಿತರರು ವಿಚಾರಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಸಿ.ಪಿ.ಎಸ್. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT