ತೀವ್ರತರದ ಆರ್ಥಿಕ ಅಸಮಾನತೆ, ಕೆಳಸ್ತರದ ಜನರಿಗೆ ಉದ್ಯೋಗ ಸಿಗದಿರುವುದು, ನಿತ್ಯದ ಜೀವನೋಪಾಯಗಳ ಬಗ್ಗೆ ವಿಚಾರ ಮಂಡನೆಯಾಗಲಿದೆ. ಕಾಂಗ್ರೆಸ್ ಮುಖಂಡ ಬಿ.ಕೆ. ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರಭಾತ್ ಪಟ್ನಾಯಕ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಪ್ರಾಧ್ಯಾಪಕರಾದ ಗೀತಾ ಸೇನ್, ದೆಹಲಿ ವಿಶ್ವವಿದ್ಯಾಲಯದ ಸಮಾಜ ಶಾಸ್ತ್ರಜ್ಞ ಎಂ.ಎನ್. ಪಾಣಿನಿ, ಎಂ.ಎಸ್. ರಾಮಯ್ಯ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಆರ್. ಇಂದಿರಾ ವಿಷಯ ಮಂಡನೆ ಮಾಡಲಿದ್ದಾರೆ ಎಂದು ವಿಚಾರಸಂಕಿರಣದ ಸಂಚಾಲಕ ಬಿ.ಕೆ. ಚಂದ್ರಶೇಖರ್ ತಿಳಿಸಿದ್ದಾರೆ.