ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು

7

ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು

Published:
Updated:
Deccan Herald

ವಿಜಯಪುರ: ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸುವುದನ್ನು ರೂಢಿಸಿಕೊಂಡು ಕುಟುಂಬಗಳ ನಿರ್ವಹಣೆಯನ್ನು ಸಮರ್ಥವಾಗಿ ಮಾಡುವವರಾಗಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ಷೇತ್ರಾಭಿವೃದ್ಧಿ ಅಧಿಕಾರಿ ಶರ್ಮಿಳಾ ತಿಳಿಸಿದರು.

ಹೋಬಳಿಯ ಯಲುವಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕೇಂದ್ರದಿಂದ ಆಯೋಜಿಸಿದ್ದ ‘ಮಹಿಳಾ ವಿಚಾರ ಗೋಷ್ಠಿ’ಯಲ್ಲಿ ಅವರು ಮಾತನಾಡಿದರು.

ಮಹಿಳೆಯರು ಕೇವಲ ನಾಲ್ಕು ಗೋಡೆಗಳ ಮಧ್ಯಕ್ಕೆ ಸೀಮಿತವಾಗಬಾರದು. ಮಹಿಳೆಯರ ಮೇಲೆ ಸಮಾಜದಲ್ಲಿ ಸಾಕಷ್ಟು ಹೊಣೆಗಾರಿಕೆಯಿದೆ. ಈ ಸಮಾಜವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕಾಗಿದ ಜವಾಬ್ದಾರಿಯಿದೆ ಎಂದರು.

ಮಕ್ಕಳ ಪೋಷಣೆ, ಕುಟುಂಬ ನಿರ್ವಹಣೆ, ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ನಿಷೇಧಿಸುವುದು ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವಂತಹ ಕಾರ್ಯವಾಗಬೇಕಾಗಿದೆ ಎಂದು ತಿಳಿಸಿದರು.

ಹೆಣ್ಣು ಜ್ಞಾನವಂತರಾದರೆ ಕುಟುಂಬ ಉತ್ತಮವಾಗಿ ನಡೆಯಲಿದೆ. ಜ್ಞಾನವಿಕಾಸ ಕೇಂದ್ರಗಳ ಮೂಲಕ ಮಹಿಳೆಯರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಮಹಿಳೆಯರು ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಮಹಿಳಾಪರ ಹೋರಾಟಗಾರ್ತಿ ದೀಪಕ್ಕ ಮಾತನಾಡಿ, ಸಮಯೋಚಿತವಾಗಿ ಬುದ್ಧಿಮತ್ತೆಯನ್ನು ಪ್ರಯೋಗಿಸುವುದು ಜ್ಞಾನ. ಇಂತಹ ಜ್ಞಾನವನ್ನು ಸಾಮಾಜಿಕವಾಗಿ ಬಳಕೆ ಮಾಡಿಕೊಳ್ಳಬೇಕು. ದೌರ್ಬಲ್ಯಗಳನ್ನು ಶಕ್ತಿಯನ್ನಾಗಿ ಬಳಕೆ ಮಾಡಿಕೊಳ್ಳಬೇಕು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಬದುಕು ಉತ್ತಮವಾಗಿದೆ. ಕಾಲಹರಣ ಮಾಡುವುದನ್ನು ಬಿಟ್ಟು ಪ್ರಗತಿಗಾಗಿ ಚಿಂತನೆ ಮಾಡಬೇಕು. ಮಹಿಳೆಯರು ಮಾಡಿಕೊಳ್ಳುವಂತಹ ಅಲಂಕಾರಗಳು ಹೆಣ್ಣುತನಕ್ಕೆ ಕಂಟಕವಾಗುತ್ತದೆ ಎಂದರು.

ಮಕ್ಕಳಿಗೆ ತೊಡಿಸುವ ವಸ್ತ್ರಗಳ ಬಗ್ಗೆ ಜಾಗ್ರತೆಯಿರಲಿ. ವಿದ್ಯಾವಂತರಾದಂತೆಲ್ಲಾ ವಿಚ್ಛೇದನ ಪಡೆದುಕೊಳ್ಳಲು ಮುಂದಾಗುತ್ತಿದ್ದಾರೆ ಎಂದರು.

ಸಹಕಾರ ಮನಸ್ಥಿತಿಯಲ್ಲಿ ನಡೆಯುವುದನ್ನು ತಪ್ಪುತ್ತಿದ್ದಾರೆ. ಮಕ್ಕಳಿಗೆ ಕೇವಲ ಪಾಕಶಾಲೆಯ ಕಲೆಯನ್ನು ಕಲಿಸುವುದಿಲ್ಲ. ಎಲ್ಲವನ್ನೂ ನಿರ್ವಹಿಸುವುದನ್ನು ಕಲಿಸಬೇಕಾಗಿದೆ. ಮಹಿಳೆಯರಲ್ಲಿ ಜ್ಞಾನ ಕಡಿಮೆಯಾದಂತೆಲ್ಲಾ ನ್ಯಾಯಾಲಯಗಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.

ವಿದ್ಯಾಸಂಸ್ಥೆಗಳು ಹಣ ಗಳಿಸುವಂತಹ ಕಸುಬಿನಲ್ಲಿ ತೊಡಗಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಬದುಕುವ ಕಲೆಯನ್ನು ಕಲಿಸುತ್ತಿಲ್ಲ. ಆದ್ದರಿಂದ ಮಹಿಳೆಯರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕು ಎಂದರು.

ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಮಹಿಳಾ ಸಂಘದ ಅಧ್ಯಕ್ಷೆ ಮಂಜುಳಾ, ಹೇಮಾವತಿ, ಮಮತಾ, ಮೀನಾಕ್ಷಮ್ಮ, ಆನಂದಮ್ಮ, ರಾಧಮ್ಮ, ನಳಿನಾ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !