ಗುರುವಾರ , ಆಗಸ್ಟ್ 5, 2021
21 °C
ಜೊತೆಗಿದ್ದ ಮಗ ನಾಪತ್ತೆ: ಪೊಲೀಸರಿಂದ ತನಿಖೆ ತೀವ್ರ

ವೃದ್ಧ ದಂಪತಿ ಕೊಲೆ: ಪುತ್ರನೇ ಹಂತಕ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮಹದೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಮೈಸೂರಿನವರಾದ ನರಸಿಂಹ ರಾಜು (70) ಮತ್ತು ಸರಸ್ವತಿ (60) ಕೊಲೆಯಾದವರು. ಈ ವೃದ್ಧ ದಂಪತಿ ಒಂದು ವರ್ಷದಿಂದ ಕಾವೇರಿಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬುಧವಾರ ಬೆಳಿಗ್ಗೆ 8.30ರ ಸುಮಾರಿಗೆ ಮನೆ ಕೆಲಸದವಳು ಬಂದಾಗ ಪ್ರಕರಣ ಬಯಲಾಗಿದೆ.

ಹತ್ಯೆಯಾದ ನರಸಿಂಹರಾಜು ಅವರು ಈ ಹಿಂದೆ ಮದುವೆ ದಲ್ಲಾಳಿಯಾಗಿದ್ದರು. ಸರಸ್ವತಿ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಕೆಲವು ವರ್ಷಗಳಿಂದ ಕೆಲಸ ಬಿಟ್ಟು ಇಬ್ಬರೂ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಘಟನೆ ನಡೆದ ಬಳಿಕ ದಂಪತಿಯ ಪುತ್ರ ಸಂತೋಷ್ ನಾಪತ್ತೆಯಾಗಿದ್ದು, ಆತನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಲೆಕ್ಕಪರಿಶೋಧಕನಾಗಿ ಕೆಲಸ ಮಾಡುತ್ತಿರುವ ಸಂತೋಷ್ ಕೂಡ ಪೋಷಕರ ಜೊತೆ ವಾಸವಾಗಿದ್ದು, ಕಾಮಾಕ್ಷಿಪಾಳ್ಯದಲ್ಲೇ ತನ್ನ ಸ್ವಂತ ಕಚೇರಿ ಹೊಂದಿದ್ದ ಎಂದು ಪೊಲೀಸರು ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು