ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್.ಎಚ್‌. ಬಾಲಕೃಷ್ಣ ನಿಧನ

Last Updated 10 ಜೂನ್ 2019, 20:02 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ವಕೀಲ ಎಲ್.ಎಚ್. ಬಾಲಕೃಷ್ಣ (86) ಅವರು ಹೃದಯಾಘಾತದಿಂದ ಸೋಮವಾರ ನಿಧನರಾದರು.

ಮೈಸೂರು ಗ್ರಾಮಾಂತರ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ಆರು ವರ್ಷಗಳು ಕೆಲಸ ಮಾಡಿದ್ದ ಇವರು, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ1996ರಲ್ಲಿ ಚುನಾವಣೆಗೂ ಸ್ಪರ್ಧಿಸಿದ್ದರು.

ಮೂವರು ಹೆಣ್ಣು ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಚಿತ್ರನಿರ್ದೇಶಕ ಎನ್.ಎಸ್. ಶಂಕರ್ ಅವರು ಬಾಲಕೃಷ್ಣ ಅವರ ಅಳಿಯ.

ಮೃತರ ಅಂತ್ಯಕ್ರಿಯೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಲಾಲನ್‌ದೇವನಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT