ಶುಕ್ರವಾರ, ಆಗಸ್ಟ್ 19, 2022
22 °C

ಪ್ರತ್ಯೇಕ ಅಪಘಾತ: ಸವಾರ ಸಾವು, ಮೂವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಎರಡು ಕಡೆ ಬುಧವಾರ ರಾತ್ರಿ ಅಪಘಾತವಾಗಿದ್ದು, ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿ ಹೊರಟಿದ್ದ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.

'ಲಾಲ್‌ಬಾಗ್ ಉದ್ಯಾನದ ಪಶ್ಚಿಮ ದ್ವಾರದ ರಸ್ತೆಯಲ್ಲಿ ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಆಗಿದೆ. ಬೈಕ್ ಸವಾರ ಸುರೇಶ್‌ (36) ಎಂಬುವವರು ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ಹೇಳಿದರು.

‘ಅಪಘಾತದ ನಂತರ, ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ‘ ಎಂದೂ ತಿಳಿಸಿದರು.

ರಸ್ತೆ ವಿಭಜಕಕ್ಕೆ ಗುದ್ದಿದ ಕಾರು: ‘ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ಇನ್ನೋವಾ ಕಾರೊಂದು ರಸ್ತೆ ವಿಭಜಕಕ್ಕೆ ಗುದ್ದಿ ಜಖಂಗೊಂಡಿದೆ. ಕಾರಿನಲ್ಲಿದ್ದ ಚಾಲಕ ಸೇರಿ ಮೂವರಿಗೆ ಗಾಯವಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು