ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಬೆಂಗಳೂರಿಗೆ ಈ ವರ್ಷ ಪ್ರತ್ಯೇಕ ಕಾಯ್ದೆ: ಡಿಸಿಎಂ

ಮೂಲಸೌಲಭ್ಯ ಕಲ್ಪಿಸಲು ಒತ್ತು ನೀಡಲು ಈ ಕ್ರಮ –ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ
Last Updated 9 ಸೆಪ್ಟೆಂಬರ್ 2020, 19:34 IST
ಅಕ್ಷರ ಗಾತ್ರ

ಬೆಂಗಳೂರು: ‘ಹೆಚ್ಚುತ್ತಿರುವ ಜನಸಂಖ್ಯೆಯಿಂದ ಎದುರಾಗುವ ಮೂಲಸೌಲಭ್ಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ಬೆಂಗಳೂರು ನಗರಕ್ಕೆ ಈ ವರ್ಷವೇ ಪ್ರತ್ಯೇಕ ಕಾಯ್ದೆ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ’ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ
ನಾರಾಯಣ ತಿಳಿಸಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ರಾಜ್ಯದ ಮೂಲೆ ಮೂಲೆಗಳಿಂದ, ಇತರೆ ರಾಜ್ಯಗಳಿಂದ ಬೆಂಗಳೂರಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಹೀಗಾಗಿ ಪ್ರತ್ಯೇಕ ಕಾಯ್ದೆ ಅಗತ್ಯವಾಗಿದೆ. ಕೆಎಂಸಿ ಕಾಯ್ದೆ ವ್ಯಾಪ್ತಿಯಲ್ಲಿ ನಗರವನ್ನು ನಿರ್ವಹಿಸಲು ಸಾಧ್ಯವಿಲ್ಲ. ಈಗಾಗಲೇ ಮಸೂದೆ ಮಂಡಿಸಲಾಗಿದ್ದು, ಅದು ಜಂಟಿ ಸಲಹಾ ಸಮಿತಿಯ ಪರಿಶೀಲನೆಯಲ್ಲಿದೆ’ ಎಂದರು.

‘ದೇಶದಲ್ಲಿಯೇ ಬೆಂಗಳೂರು ಅತಿದೊಡ್ಡ ಉದ್ಯೋಗ ತಾಣವೂ ಆಗಿರುವುದರಿಂದ ಅತ್ಯುತ್ತಮ ಯೋಜನೆ ಬೇಕು. ಉತ್ತಮ ಸಹಕಾರ ಬೇಕು ಹಾಗೂ ಯೋಜನೆಗಳನ್ನು ಜಾರಿ ಮಾಡಲು ವ್ಯವಸ್ಥೆ ಬೇಕು. ಈ ಎಲ್ಲ ಕಾರಣಕ್ಕೆ ಪ್ರತ್ಯೇಕ ಕಾಯ್ದೆ ತರಲು ಸರ್ಕಾರ ಮುಂದಾಗಿದೆ. ಬೆಂಗಳೂರಿನ ಎಲ್ಲ ಜನ ಪ್ರತಿನಿಧಿಗಳ ಜತೆ ಈ ಬಗ್ಗೆ ಸಮಾಲೋಚನೆ ನಡೆಸಲಾಗಿದೆ’ ಎಂದರು.

ಸರ್ಕಾರದ ಪಾತ್ರವಿಲ್ಲ: ಬಿಬಿಎಂಪಿ ಚುನಾವಣೆಯಲ್ಲಿ ಸರ್ಕಾರದ ಪಾತ್ರವೇನೂ ಇಲ್ಲ. ಚುನಾವಣಾ ಆಯೋಗ ತನ್ನ ಕೆಲಸ ಮಾಡುತ್ತದೆ. ಅಗತ್ಯ ಸೌಕರ್ಯಗಳನ್ನಷ್ಟೇ ಸರ್ಕಾರ ಮಾಡಿಕೊಡುತ್ತಿದೆ ಎಂದು ಹೇಳಿದರು.

***

ಬಿಬಿಎಂಪಿ ಚುನಾವಣೆಯಲ್ಲಿ ಸರ್ಕಾರದ ಪಾತ್ರವೇನೂ ಇಲ್ಲ. ಚುನಾವಣಾ ಆಯೋಗ ತನ್ನ ಕೆಲಸ ಮಾಡುತ್ತದೆ. ಅಗತ್ಯ ಸೌಕರ್ಯಗಳನ್ನಷ್ಟೇ ಸರ್ಕಾರ ಮಾಡಿಕೊಡುತ್ತಿದೆ.
– ಡಾ.ಸಿ.ಎನ್. ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT