ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬೆಂಗಳೂರು ಅಭಿವೃದ್ಧಿಗೆ ವಿಶೇಷ ಕಾರ್ಯಸೂಚಿ’

Last Updated 28 ನವೆಂಬರ್ 2021, 16:36 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗೆ ವಿಶೇಷ ಕಾರ್ಯಸೂಚಿಯೊಂದನ್ನು ರೂಪಿಸಿ, ಶಾಸನಸಭೆಯ ಅನುಮೋದನೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಯೋಕಾನ್‌ ಸಂಸ್ಥೆ ಭಾನುವಾರ ಆಯೋಜಿಸಿದ್ದ ‘ಬೆಂಗಳೂರು ಕಾರ್ಯಸೂಚಿ’ ಕುರಿತ ಚರ್ಚೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜಧಾನಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರ ಅಭಿಪ್ರಾಯ ಆಲಿಸಲಾಗುವುದು. ಬಳಿಕ ಸಂಪುಟ ಸದಸ್ಯರ ಜತೆ ಚರ್ಚಿಸಿ ಕಾರ್ಯಸೂಚಿಯನ್ನು ಸಿದ್ಧಪಡಿಸಲಾಗುವುದು’ ಎಂದರು.

ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಕಾರ್ಯಸೂಚಿಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ, ಚರ್ಚಿಸಲಾಗುವುದು. ಶಾಸನಸಭೆಯಲ್ಲಿ ಕಾರ್ಯಸೂಚಿಯನ್ನು ಅಂತಿಮಗೊಳಿಸಲಾಗುವುದು. ಆ ಬಳಿಕ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದರು.

ಬೆಂಗಳೂರಿನ ಆರ್ಥಿಕತೆ ಮತ್ತು ಅಭಿವೃದ್ಧಿಯ ದಿಸೆಯಲ್ಲಿ ಕೈಗೊಳ್ಳಬೇಕಿರುವ ಯೋಜನೆಗಳ ಕುರಿತು ಚರ್ಚಿಸಲು ಕೆಲವು ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಈ ರೀತಿಯ ಸರಣಿ ಸಭೆಗಳು ನಡೆಯಲಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT