ಬೆಂಗಳೂರು: ಬೆಂಗಳೂರು ನಗರ ಪೊಲೀಸರ ಅಧಿಕೃತ ಸಂವಹನಕ್ಕಾಗಿ ಪ್ರತ್ಯೇಕ ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ.

ನಗರ ಪೊಲೀಸರು ಆಂತರಿಕ ಸಂವಹನಕ್ಕಾಗಿ ಸುರಕ್ಷಿತ, ಪರಿಣಾಮಕಾರಿ ಮತ್ತು ರಚನಾತ್ಮಕ ಸಂದೇಶ ವಿನಿಮಯಕ್ಕಾಗಿ BCPChat ಹೆಸರಿನ ವಿಶೇಷ ಆ್ಯಪ್ ಅನ್ನು ರೂಪಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ತಿಳಿಸಿದರು.

ಆ್ಯಪ್ ವೈಶಿಷ್ಟ್ಯ: BCPChat ಅನ್ನು ದಿನನಿತ್ಯದ ಪೊಲೀಸ್ ಕಾರ್ಯ ಚಟುವಟಿಕೆಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಗಣ್ಯ ವ್ಯಕ್ತಿಗಳ ಇರುವಿಕೆ ಹಾಗೂ ಸಂಚಾರ ನಿರ್ವಹಣೆ, ಮಾಧ್ಯಮ ವರದಿಗಳು (ಮುದ್ರಣ, ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಜಾಲತಾಣ), ದೈನಂದಿನ ಅಪರಾಧ ವರದಿ, ದೈನಂದಿನ ಪರಿಸ್ಥಿತಿ ವರದಿಗಳನ್ನು ಸುಲಭವಾಗಿ ಹಂಚಿಕೊಳ್ಳಲು ಈ ಆ್ಯಪ್ನಲ್ಲಿ ಸಾಧ್ಯವಾಗಲಿದೆ ಎಂದು ತಿಳಿಸಿದರು.

ದತ್ತಾಂಶಗಳನ್ನು ರಾಜ್ಯ ದತ್ತಾಂಶ ಕೇಂದ್ರದಲ್ಲಿ ಸುರಕ್ಷಿತವಾಗಿ ಸಂಗ್ರಹಿಸಲಾಗುವುದು. ಈ ಆ್ಯಪ್ನಿಂದ ಸರ್ಕಾರದ ಆದೇಶಗಳು, ಸುತ್ತೋಲೆಗಳು ಮತ್ತು ನೋಟಿಸ್ಗಳಂತಹ ಅಧಿಕೃತ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಗತ್ಯಕ್ಕೆ ತಕ್ಕಂತೆ ತಲುಪಿಸಲು ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.