ಬೆಂಗಳೂರು: ಕೆ.ಆರ್. ಪುರ ಟಿನ್ ಫ್ಯಾಕ್ಟರಿ ಬಳಿಯಿಂದ ಸಿಲ್ಕ್ಬೋರ್ಡ್ ಜಂಕ್ಷನ್ವರೆಗೆ ಬಿಎಂಟಿಸಿ ಬಸ್ಗಳ ಸಂಚಾರಕ್ಕೆ ಪ್ರತ್ಯೇಕ ಪಥ ಕಾಯ್ದಿರಿಸುವ ಕಾಮಗಾರಿ ಭರದಿಂದ ಸಾಗಿದೆ.

ಬಿಎಂಟಿಸಿ, ಬೆಂಗಳೂರು ಸಂಚಾರ ಪೊಲೀಸರ ಸಹಯೋಗದಲ್ಲಿ ₹ 15 ಕೋಟಿ ವೆಚ್ಚದಲ್ಲಿ ‘ಪ್ರತ್ಯೇಕ ಪಥ’ ಕಾಯ್ದಿರಿಸುವ ಯೋಜನೆ ರೂಪಿಸ ಲಾಗಿದೆ.

ಇದೇ 20ರಂದು ಪರೀಕ್ಷಾರ್ಥ ಸಂಚಾರ ನಡೆಯಲಿದ್ದು, ನವೆಂಬರ್ 1ರಿಂದ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ.

ಈ ಪಥವನ್ನು ಬಿಎಂಟಿಸಿ ಬಸ್ ಹಾಗೂ ತುರ್ತು ಸೇವಾ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸ ಲಾಗುವುದು. ಇತರೆ ವಾಹನಗಳ ಮೇಲೆ ನಿಗಾವಹಿಸಲು ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಈ ಪಥದೊಳಗೆ ಬೇರೆ ವಾಹನಗಳು ಪ್ರವೇಶಿಸಿದರೆ ಪೊಲೀಸರು ದಂಡ ವಿಧಿಸಲಿದ್ದಾರೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.