ಮಂಗಳವಾರ, ಏಪ್ರಿಲ್ 7, 2020
19 °C

ಸರಣಿ ಕಾರುಗಳ ಅಪಘಾತ; ಚಿಕಿತ್ಸೆಗೆ ಸ್ಪಂದಿಸದೆ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಕಿಶೋರ್ (23) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

‘ವೆಂಕಟಾಲ ಮೇಲ್ಸೇತುವೆಯಲ್ಲಿ ರಾತ್ರಿ 8.30ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಹೊಂಡಾ ಸಿಟಿ ಕಾರಿನಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ಕಿಶೋರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಪೊಲೀಸರು ಹೇಳಿದರು.

‘ಕಿಶೋರ್ ಹಾಗೂ ಸ್ನೇಹಿತರು ಹೊಂಡಾ ಸಿಟಿ ಕಾರಿನಲ್ಲಿ ಹೆಬ್ಬಾಳದಿಂದ ಯಲಹಂಕ ಮಾರ್ಗವಾಗಿ ವಿಮಾನ ನಿಲ್ದಾಣದತ್ತ ಹೊರಟಿದ್ದರು. ನಿರಂಜನ್ ಎಂಬುವರು ಕಾರು ಓಡಿಸುತ್ತಿದ್ದರು. ವೆಂಕಟಾಲ ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಗುದ್ದಿದ್ದ ಕಾರು, ಎದುರಿಗೆ ಬರುತ್ತಿದ್ದ ಸ್ವಿಫ್ಟ್‌ ಕಾರಿಗೆ ಡಿಕ್ಕಿ ಹೊಡೆದಿತ್ತು. ಅದರ ಹಿಂದೆಯೇ ಬರುತ್ತಿದ್ದ ಇನ್ನೊಂದು ಕಾರಿಗೂ ಗುದ್ದಿ ರಸ್ತೆಯಲ್ಲೇ ಉರುಳಿಬಿದ್ದಿತ್ತು.’

‘ಅಪಘಾತದಲ್ಲಿ ಕಿಶೋರ್ ಸೇರಿ ಮೂವರು ತೀವ್ರವಾಗಿ ಗಾಯಗೊಂಡಿದ್ದರು. ಕಿಶೋರ್ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಪೊಲೀಸರು ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು