ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಏರ್‌ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ: 9 ಕಾರು ಜಖಂ

Published 19 ಡಿಸೆಂಬರ್ 2023, 12:15 IST
Last Updated 19 ಡಿಸೆಂಬರ್ 2023, 12:15 IST
ಅಕ್ಷರ ಗಾತ್ರ

ಬೆಂಗಳೂರು: ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯಲ್ಲಿ ಸೋಮವಾರ ಸಂಜೆ ಸರಣಿ ಅಪಘಾತ ಸಂಭವಿಸಿದ್ದು 9 ಕಾರುಗಳು ಜಖಂಗೊಂಡಿವೆ.

ದೊಡ್ಡಜಾಲದ ಬಳಿ ಭಾರಿ ಅಪಘಾತ ಸಂಭವಿಸಿ ವಾಹನಗಳು ಒಂದರ ನಂತರ ಒಂದರಂತೆ ಡಿಕ್ಕಿ ಹೊಡೆದವು. ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ಧಾರೆ. ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದರು. ಎಲ್ಲ ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಈ ಅಪಘಾತದ ದೃಶ್ಯವನ್ನು ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

‘ಈ ರಸ್ತೆಯಲ್ಲಿ ಸೋಮವಾರ ಸಂಜೆ ವಾಹನ ದಟ್ಟಣೆ ವಿಪರೀತವಾಗಿತ್ತು. ಸಾಲುಗಟ್ಟಿ ವಾಹನಗಳು ಚಲಿಸುತ್ತಿದ್ದವು. ಮುಂದೆ ಚಲಿಸುತ್ತಿದ್ದ ಓಮ್ನಿಯೊಂದರ ಚಾಲಕ ದಿಢೀರ್‌ ಬ್ರೇಕ್‌ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿವೆ. ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ತೆರಳಿ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು’ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT