ಶನಿವಾರ, ಸೆಪ್ಟೆಂಬರ್ 18, 2021
29 °C

ಹೋಟೆಲ್‌ಗಳಲ್ಲಿ ಸೇವೆಗೆ ಅವಕಾಶ: ಸ್ವಾಗತಾರ್ಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:‘ಹೋಟೆಲ್‌ಗಳಲ್ಲಿ ಸೋಮವಾರದಿಂದ ಶೇ 50ರಷ್ಟು ಆಸನ ವ್ಯವಸ್ಥೆಯೊಂದಿಗೆ ಸಂಜೆ 5 ಗಂಟೆಯವರೆಗೆ ಸೇವೆಗೆ ಅವಕಾಶ ನೀಡಿರುವುದು ಸ್ವಾಗತಾರ್ಹ’ ಎಂದು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.

‘ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿದೆ. ಹೋಟೆಲ್‌ ಸಿಬ್ಬಂದಿ ಹಾಗೂ ಕೆಲಸಗಾರರು ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದಾರೆ. ಗ್ರಾಹಕರ ಆರೋಗ್ಯ ದೃಷ್ಟಿಯಿಂದ ಹೋಟೆಲ್‌ಗಳಲ್ಲಿ ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು.’

‘ಗ್ರಾಹಕರು ಹೋಟೆಲ್‌ಗಳಲ್ಲಿ ಸಮಯ ವ್ಯರ್ಥ ಮಾಡಬಾರದು. ಅಂತರ ಕಾಯ್ದುಕೊಳ್ಳುವ ಮೂಲಕ ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು