ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ.ಇಬ್ರಾಹಿಂ‌ ದಾವೆ ವಜಾಗೊಳಿಸಿದ ಸೆಷನ್ಸ್ ನ್ಯಾಯಾಲಯ

Published 22 ಮಾರ್ಚ್ 2024, 16:27 IST
Last Updated 22 ಮಾರ್ಚ್ 2024, 16:27 IST
ಅಕ್ಷರ ಗಾತ್ರ

ಬೆಂಗಳೂರು: ಜಾತ್ಯಾತೀತ ಜನತಾ ದಳದ (ಜೆಡಿಎಸ್‌) ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟಿಸಿದ್ದ ಮತ್ತು ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರನ್ನಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ನೇಮಿಸಿದ್ದನ್ನು ಪ್ರಶ್ನಿಸಿ ಸಿ.ಎಂ. ಇಬ್ರಾಹಿಂ ಸಲ್ಲಿಸಿದ್ದ ದಾವೆಯನ್ನು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ.

ಸಿ.ಎಂ.ಇಬ್ರಾಹಿಂ ಸಲ್ಲಿಸಿದ್ದ ಅಸಲು ದಾವೆ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಕೆ‌.ಸಾವಿತ್ರಿ, ದಾವೆಯನ್ನು ವಜಾಗೊಳಿಸಿ ಶುಕ್ರವಾರ ಆದೇಶಿಸಿದ್ದಾರೆ.

‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ನಿಯಮಗಳಿಗೆ ವಿರುದ್ಧವಾಗಿ ನನ್ನನ್ನು ರಾಜ್ಯ ಘಟಕದ ಅಧ್ಯಕ್ಷ ಹುದ್ದೆಯಿಂದ ವಜಾ ಮಾಡಿದ್ದಾರೆ’ ಎಂದು ಆಕ್ಷೇಪಿಸಿ ಇಬ್ರಾಹಿಂ ಕೋರ್ಟ್ ಮೆಟ್ಟಿಲೇರಿದ್ದರು.

ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದಿಂದ ಇಬ್ರಾಹಿಂ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಉಚ್ಚಾಟನೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT