ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲಸೆ ಕಾರ್ಮಿಕರ ಪ್ರಯಾಣ ಕಾರ್ಯತಂತ್ರಕ್ಕೆ ಸೂಚನೆ

Last Updated 12 ಜೂನ್ 2020, 21:19 IST
ಅಕ್ಷರ ಗಾತ್ರ

ಬೆಂಗಳೂರು: ‘ಸೇವಾ ಸಿಂಧು ಪೋರ್ಟಲ್ ನಲ್ಲಿ ತಮ್ಮ ರಾಜ್ಯಗಳಿಗೆ ತೆರಳಲು ನೋಂದಣಿ ಮಾಡಿಕೊಂಡಿರುವ ವಲಸೆ ಕಾರ್ಮಿಕ
ರನ್ನು ಅವರ ರಾಜ್ಯಗಳಿಗೆ ತಲುಪಿಸಲು ಕಾರ್ಯತಂತ್ರ ರೂಪಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, 'ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿರುವ ಪ್ರತಿಯೊಬ್ಬ ಕಾರ್ಮಿಕರಿಗೂ ಎಸ್ ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತಿದೆ' ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಸುಪ್ರೀಂ ಕೋರ್ಟ್ ಜೂನ್ 9ರ ಆದೇಶದಲ್ಲಿ, ರಾಜ್ಯ ಸರ್ಕಾರಗಳು ವಲಸೆ ಕಾರ್ಮಿಕರನ್ನು ಗುರುತಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿದ್ದರೂ ರಾಜ್ಯ ಸರ್ಕಾರ ಯಾವುದೇ ಸಮಗ್ರ ಅಥವಾ ಪಾರದರ್ಶಕ ವ್ಯವಸ್ಥೆ ರೂಪಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿತು.

‘ವಲಸೆ ಕಾರ್ಮಿಕರು ನೋಂದಣಿ ಮಾಡಿಕೊಂಡ ನಂತರ ಶ್ರಮಿಕ್ ರೈಲುಗಳನ್ನು ಹತ್ತಲು ನೆರವಾಗುವಂತೆ ಮೊದಲೇ ಮಾಹಿತಿ ನೀಡುವ ಬಗ್ಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು’ ಎಂದು ಆದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT