ಶನಿವಾರ, ಜನವರಿ 18, 2020
23 °C

ಹಿಂದು ಸೇವಾ ಪ್ರತಿಷ್ಠಾನದಿಂದ 15ಕ್ಕೆ ‘ಸೇವಾಥಾನ್’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರ್ವಜನಿಕರಲ್ಲಿ ಸೇವಾ ಮನೋಭಾವ ಹೆಚ್ಚಿಸುವ ಉದ್ದೇಶದಿಂದ ಹಿಂದು ಸೇವಾ ಪ್ರತಿಷ್ಠಾನವು ಇದೇ 15ರಂದು ‘ಸೇವಾಥಾನ್’ ಕಾರ್ಯಕ್ರಮ ಏರ್ಪಡಿಸಿದೆ. 

ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 6.30ರಿಂದ ನಡೆಯುವ ಈ ಕಾರ್ಯಕ್ರಮದಲ್ಲಿ 5 ಕಿ.ಮೀ ಹಾಗೂ 2 ಕಿ.ಮೀ ನಡಿಗೆ ಇರಲಿದೆ ಎಂದು ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಸುರೇಶ್‌ ತಿಳಿಸಿದರು.

ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಸೇವಾಥಾನ್‌ನಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ತೇಜಸ್ವಿ ಸೂರ್ಯ, ಶಾಸಕ ಉದಯ್ ಬಿ.ಗರುಡಾಚಾರ್, ಮೇಯರ್‌ ಎಂ.ಗೌತಮ್ ಕುಮಾರ್, ಪೊಲೀಸ್‌ ಆಯುಕ್ತ ಭಾಸ್ಕರ್ ರಾವ್ ಭಾಗವಹಿಸಲಿದ್ದಾರೆ’ ಎಂದರು.

‘1990ರಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾದ ಹಿಂದು ಸೇವಾ ಪ್ರತಿಷ್ಠಾನದ ಸ್ಥಾಪಕ ಅಜಿತ್‌ ಕುಮಾರ್ ಅವರ ಸ್ಮರಣಾರ್ಥ ಪ್ರತಿವರ್ಷ ಸೇವಾ ದಿನ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಆರ್‌.ವಿ. ದಂತ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಬೆಳಗಾವಿಯ ಸಫಲಾ ನಾಗರತ್ನ, ಮಳವಳ್ಳಿಯ ಕಾಮೇಗೌಡ ಹಾಗೂ ಬೆಂಗಳೂರಿನ ಗೀತಾ ಅವರನ್ನು ಸನ್ಮಾನಿಸಲಾಗುವುದು’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು