ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ ಆರೋಪ: ಪ್ರಮಾಣ ಪತ್ರ ಸಲ್ಲಿಕೆ

Last Updated 16 ಆಗಸ್ಟ್ 2019, 19:57 IST
ಅಕ್ಷರ ಗಾತ್ರ

ಬೆಂಗಳೂರು: ‘ಕೆಂಗೇರಿ ಉಪನಗರದ ಸಂರಕ್ಷಣಾ ಅನಾಥಾಶ್ರಮದಲ್ಲಿಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಲಾಗಿದೆ ಮತ್ತು ಯಾವುದೇ ಕಾನೂನು ಲೋಪವಾಗಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂಜೀವ್‌ ಕುಮಾರ್ ಹಂಚಾಟೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ಎಸ್‌.ಎಸ್.ಮಹೇಂದ್ರ ಅವರು ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಿದರು. ‘ಈ ಪ್ರಕರಣದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಕಾನೂನುಬದ್ಧವಾಗಿ ನಡೆದುಕೊಂಡಿದೆ’ ಎಂದು ತಿಳಿಸಿದರು. ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT