ಬೆಂಗಳೂರು: ಉದ್ಯಮದ ಬಗ್ಗೆ ಮಾತುಕತೆ ಗೆಂದು ಯುವತಿಯೊಬ್ಬರನ್ನು ಹೋಟೆಲ್ಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಗರದ ನಿವಾಸಿಯಾಗಿರುವ ಯುವತಿ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಮಿಳು ನಾಡಿನ ನಿವಾಸಿಯಾಗಿರುವ ಆರೋಪಿ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಉದ್ಯಮಿ ಆಗಿರುವ ಆರೋಪಿ, ತಮಿಳುನಾಡಿನಿಂದ ಇತ್ತೀಚೆಗೆ ನಗರಕ್ಕೆ ಬಂದಿದ್ದ. ಸಂಬಂಧಿಕರೊಬ್ಬರ ಮೂಲಕ ಯುವತಿಯನ್ನು ಸಂಪರ್ಕಿಸಿದ್ದ ಈತ, ಉದ್ಯಮ ಅಭಿವೃದ್ಧಿ ಬಗ್ಗೆ ಮಾತನಾಡಬೇಕೆಂದು ಹೇಳಿ ಆಗಸ್ಟ್ 6ರಂದು ಹೋಟೆಲ್ಗೆ ಕರೆಸಿಕೊಂಡಿದ್ದ. ಇದೇ ವೇಳೆ ಯುವತಿ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಜೀವ ಬೆದರಿಕೆಯೊಡ್ಡಿದ್ದ. ಆತನಿಂದ ತಪ್ಪಿಸಿಕೊಂಡಿದ್ದ ಯುವತಿಯು ಸಂಬಂಧಿಕರಿಗೆ ವಿಷಯ ತಿಳಿಸಿದ್ದರು. ನಂತರವೇ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.