ಬೆಂಗಳೂರು: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಸೂರಜ್ ರೇವಣ್ಣ ಅವರನ್ನು ಪೊಲೀಸರು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ (42ನೇ ಎಸಿಎಂಎಂ) ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ಕೋರಮಂಗಲದಲ್ಲಿರುವ ನಿವಾಸದಲ್ಲಿ ಭಾನುವಾರ ಸಂಜೆ ಹಾಜರುಪಡಿಸಿದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಸೂರಜ್ ರೇವಣ್ಣ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು.

ಸೂರಜ್ ರೇವಣ್ಣ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 377, 342, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.