ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಕ್ರಿಕೆಟ್ ತರಬೇತುದಾರ ಎ.ಬಿ.ಮ್ಯಾಥ್ಯು ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಮಂಗಳವಾರ ತಡರಾತ್ರಿ ಎಫ್ಐಆರ್ ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬುದು ಗೊತ್ತಾಗಿದೆ.

ಬನ್ನೇರುಘಟ್ಟ ರಸ್ತೆಯ ಬಡಾವಣೆಯೊಂದರ ಸಂತ್ರಸ್ತೆ, ರಾಜ್ಯ ಮಹಿಳಾ ಆಯೋಗಕ್ಕೆ ಸೆ.22ರಂದು ದೂರು ನೀಡಿದ್ದರು. ಆ ದೂರಿನ ಪ್ರತಿಯನ್ನು ನೈರುತ್ಯ ವಿಭಾಗದ ಡಿಸಿಪಿಗೆ ಕಳುಹಿಸಿದ್ದ ಆಯೋಗದ ಅಧಿಕಾರಿಗಳು, ಪ್ರಕರಣದ ತನಿಖೆ ನಡೆಸುವಂತೆ ಸೂಚಿಸಿದ್ದರು. ಆಯೋಗದ ಸೂಚನೆಯ ಬಳಿಕ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಬನ್ನೇರುಘಟ್ಟ ರಸ್ತೆಯ ಶಾಲೆಯೊಂದರಲ್ಲಿ ಆರೋಪಿ ದೈಹಿಕ ಶಿಕ್ಷಣ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಅಕಾಡೆಮಿಯನ್ನೂ ನಡೆಸುತ್ತಿದ್ದು ವಿದ್ಯಾರ್ಥಿಗಳಿಗೆ ಕ್ರಿಕೆಟ್ ತರಬೇತಿಯನ್ನೂ ನೀಡುತ್ತಿದ್ದಾರೆ. ಕ್ರಿಕೆಟ್ ಅಕಾಡೆಮಿಗೆ ಪುತ್ರನನ್ನು ಕರೆಕೊಂಡು ಬರುತ್ತಿದ್ದ ಪತಿಯಿಂದ ದೂರವಾಗಿದ್ದ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಅವರೊಂದಿಗೆ ಸಲುಗೆ ಬೆಳೆಸಿಕೊಂಡಿದ್ದರು. ಅವರನ್ನು ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌಜನ್ಯ ಎಸಗಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆಯೋಗದ ಪತ್ರದ ವಿವರ: ‘ಮಹಿಳೆಯೊಬ್ಬರು ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎ.ಬಿ.ಮ್ಯಾಥ್ಯು ದೂರುದಾರರನ್ನು ವಿವಾಹ ಆಗುವುದಾಗಿ ನಂಬಿಸಿ ಅವರ ಮನೆಯಲ್ಲೇ ಒಂದು ವರ್ಷದಿಂದ ನೆಲಸಿದ್ದರು. ದೂರುದಾರೆ ಗರ್ಭಿಣಿ ಎಂದು ತಿಳಿದ ಬಳಿಕ ಅವರ ಮೊಬೈಲ್ ಹಾಗೂ ಆಸ್ಪತ್ರೆ ವರದಿ ತೆಗೆದುಕೊಂಡು ಪರಾರಿ ಆಗಿದ್ದಾರೆ ಎಂಬುದಾಗಿ ದೂರು ಬಂದಿದೆ. ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಆಯೋಗದ ಕಾರ್ಯದರ್ಶಿ ಡಿಸಿಪಿ ಅವರಿಗೆ ಸೂಚನೆ ನೀಡಿ ಪತ್ರ ಬರೆದಿದ್ದರು.

ಹಲವರ ವಿಡಿಯೊ?: ಕ್ರಿಕೆಟ್ ಅಕಾಡೆಮಿಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಆರೋಪಿ, ಅವರೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದರು. ನಂತರ, ದೈಹಿಕ ಸಂಪರ್ಕ ಬೆಳೆಸುತ್ತಿದ್ದರು. ಖಾಸಗಿ ಕ್ಷಣದ ಫೋಟೊ ಹಾಗೂ ವಿಡಿಯೊಗಳನ್ನು ರೆಕಾರ್ಡ್ ಮಾಡಿಕೊಂಡು ಮೊಬೈಲ್ನಲ್ಲಿ ಇಟ್ಟುಕೊಳ್ಳುತ್ತಿದ್ದರು. ಆರೋಪಿಯ ಮೊಬೈಲ್ನಲ್ಲಿ ನೂರಾರು ಅಶ್ಲೀಲ ವಿಡಿಯೊ ಹಾಗೂ ಫೋಟೊಗಳು ಇವೆ ಎನ್ನಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದ ಕೂಡಲೇ ಮೊಬೈಲ್ ಜಪ್ತಿ ಮಾಡಿಕೊಂಡು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗುವುದು ಎಂದು ಪೊಲೀಸರು ಹೇಳಿದರು.

ಸದ್ಯದಲ್ಲೇ ಆರೋಪಿ ವಶ

‘ಮಹಿಳೆ ನೀಡಿದ ದೂರು ಆಧರಿಸಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಸಿಕೊಳ್ಳಲಾಗಿದೆ. ಆರೋಪಿಯಿಂದ ಬೇರೆ ಮಹಿಳೆಯರಿಗೆ ಆಗಿರುವ ಅನ್ಯಾಯದ ಬಗ್ಗೆ ದೂರುದಾರೆ ತಮ್ಮ ಅರ್ಜಿಯಲ್ಲಿ ಪ್ರಸ್ತಾಪಿಸಿಲ್ಲ. ಆರೋಪಿಯನ್ನು ಸದ್ಯದಲ್ಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು’ ಎಂದು ನೈರುತ್ಯ ವಿಭಾಗದ ಡಿಸಿಪಿ ತಿಳಿಸಿದರು.

‘ಮಹಿಳೆಗೆ ಮೋಸ ಮಾಡಿಲ್ಲ’

‘ದೂರು ನೀಡಿದ ಮಹಿಳೆಗೆ ನಾನು ಮೋಸ ಮಾಡಿಲ್ಲ. ಅವರ ಜತೆಗೇ ಬದುಕುತ್ತೇನೆ. ಒಂದು ವರ್ಷದಿಂದ ಒಂದೇ ಮನೆಯಲ್ಲಿ ವಾಸವಿದ್ದೇವೆ. ಜಮೀನು ವಿಚಾರಕ್ಕೆ ನಾನು ಕೇರಳಕ್ಕೆ ಬಂದಿದ್ದೇನೆ. ಆದಷ್ಟು ಬೇಗ ಬೆಂಗಳೂರಿಗೆ ಬಂದು ಪೊಲೀಸರಿಗೆ ಮಾಹಿತಿ ನೀಡುತ್ತೇನೆ’ ಎಂಬುದಾಗಿ ಆರೋಪಿ ಮ್ಯಾಥ್ಯು ಪೊಲೀಸರಿಗೆ ತಿಳಿಸಿದ್ದಾನೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.